Tuesday, June 6, 2023
Homeಕರಾವಳಿಕಾರಿಂಜೇಶ್ವರ ದೇವಸ್ಥಾನಕ್ಕೆ ಮುಜುರಾಯಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಭೇಟಿ

ಕಾರಿಂಜೇಶ್ವರ ದೇವಸ್ಥಾನಕ್ಕೆ ಮುಜುರಾಯಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಭೇಟಿ

- Advertisement -


Renault

Renault
Renault

- Advertisement -

ಬಂಟ್ವಾಳ: ಮುಜುರಾಯಿ ಸಚಿವ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಕೋಟಾ ಶ್ರೀನಿವಾಸ್ ಪೂಜಾರಿ ಅವರು ಸೋಮವಾರ ಶಾಸಕ ರಾಜೇಶ್ ನಾಯಕ್ ಉಳಿಪಾಡಿ ಅವರೊಂದಿಗೆ ಐತಿಹಾಸಿಕ ಕಾರಿಂಜೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಕುಸಿದಿದ್ದ ಬ್ರೇಕ್ ವಾಲ್ ಪರಿಶೀಲಿಸಿದರು.

ಜಿಲ್ಲೆಯ ಎಲ್ಲ ದೇವಸ್ಥಾನಗಳ ರಕ್ಷಣೆಗೆ ಸರ್ಕಾರ, ಜಿಲ್ಲಾಡಳಿತ ಬದ್ಧವಾಗಿದ್ದು, ಐತಿಹಾಸಿಕ ಕಾರಿಂಜೇಶ್ವರ ದೇವಸ್ಥಾನದ ಹಿತದೃಷ್ಟಿಯಿಂದ ಆಸುಪಾಸಿನ ಎಲ್ಲ ಕೋರೆಗಳಿಗೆ ತಾತ್ಕಾಲಿಕ ತಡೆ ನೀಡಲು ನಿರ್ಧರಿಸಲಾಗಿದೆ ಎಂದು ಧಾರ್ಮಿಕ ಧತ್ತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಬಳಿಕ ಅಧಿಕಾರಿಗಳ ಜೊತೆ ಸಭೆ ನಡೆಸಿ ಕಲ್ಲುಕೋರೆ ಹಾಗೂ ಜಲ್ಲಿಕ್ರಷರ್ ನಿಂದ ದೇವಸ್ಥಾನಕ್ಕೆ ಸಮಸ್ಯೆಯಾಗುತ್ತಿದೆ ಎಂಬ ಭಕ್ತಾದಿಗಳ ದೂರಿನ ಹಿನ್ನೆಲೆಯಲ್ಲಿ ಶಾಸಕರ ಜೊತೆ ಪರಿಶೀಲನೆ ನಡೆಸಿ, ಅಧಿಕಾರಿಗಳ ಸಭೆ ನಡೆಸಿದ್ದೇನೆ. ಕೋರೆಯನ್ನು ತಕ್ಷಣದಿಂದಲೇ ಸ್ಥಗಿತಗೊಳಿಸಲು ಅಧಿಕಾರಿಗಳ ಮೂಲಕ ಸೂಚನೆ ನೀಡಲಾಗುವುದು. ಗಣಿಗಾರಿಕೆಯಿಂದ ದೇವಳಕ್ಕೆ ಹಾಗೂ ಇಲ್ಲಿನ ಬಂಡೆಗಳಿಗೆ ಆಗುವ ತೊಂದರೆಗಳ ಬಗ್ಗೆ ಎನ್ಐಟಿಕೆಯ ತಜ್ಞರಿಂದ ಪರಿಶೀಲನೆ ನಡೆಸಿ ಅವರ ವರದಿಯನ್ನಾಧರಿಸಿ ಮುಂದಿನ ಕ್ರಮಕೈಗೊಳ್ಳುವುದಾಗಿ ಹೇಳಿದರು.

ಆವರಣದ ಗೋಡೆಯ ಪುನರ್ ನಿರ್ಮಾಣ ಹಾಗೂ ಅನೇಕ ತುರ್ತು ಕಾಮಗಾರಿಗಳನ್ನು ಶೀಘ್ರ ನಡೆಸುವುದಾಗಿ ಹೇಳಿದ ಸಚಿವರು, ಶಾಸಕ ರಾಜೇಶ್ ನಾಯ್ಕ್ ಅವರ ಕೋರಿಕೆಯಂತೆ ಕಾರಿಂಜೇಶ್ವರ ಕ್ಷೇತ್ರವನ್ನು ಪ್ರವಾಸೋದ್ಯಮಕ್ಕೆ ಸೇರ್ಪಡೆಗೊಳಿಸಲಾಗಿದ್ದು, ತಜ್ಞರ ಸಲಹೆಯೊಂದಿಗೆ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಮಾಸ್ಟರ್ ಪ್ಲ್ಯಾನ್ ಸಿದ್ಧಪಡಿಸಲಾಗುವುದು ಎಂದು ಇದೇ ವೇಳೆ, ತಿಳಿಸಿದರು.ಈ ಸಂದರ್ಭದಲ್ಲಿ ಬೂಡ ಅಧ್ಯಕ್ಷ ದೇವದಾಸ ಶೆಟ್ಟಿ, ಮುಜರಾಯಿ ಇಲಾಖೆ ಸಹಾಯಕ ಕಮೀಷನರ್ ವೆಂಕಟೇಶ್, ಗಣಿ ಇಲಾಖಾಧಿಕಾರಿ ಮಾಹದೇಶ್ವರ, ತಹಶಿಲ್ದಾರ್ ರಶ್ಮಿ ಎಸ್. ಆರ್, ಕಂದಾಯ ಅಧಿಕಾರಿ ನವೀನ್, ಗ್ರಾಮ ಕರಣೀಕೆ ಆಶಾ ಮೆಹಂದಲೆ, ಪ್ರಮುಖರಾದ ಗಣಪತಿ ಮಚ್ಚಿನ್ನಾಯ, ಶಿವಪ್ಪ ಗೌಡ, ಮೋಹನ್ ಆಚಾರ್ಯ ಸೇರಿದಂತೆ ಇನ್ನಿತರರು ಹಾಜರಿದ್ದರು.

- Advertisement -

LEAVE A REPLY

Please enter your comment!
Please enter your name here

Most Popular

Recent Comments