ಮಂಗಳೂರು : ನವೆಂಬರ್ 5 ರಂದು ನಡೆಯುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯ ಸಿದ್ಧತೆಗಳು ವ್ಯವಸ್ಥಿತವಾಗಿ ಮಾಡಲಾಗಿದೆ ಎಂದು ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.
ಬಹುಕಾಲದ ನಂತರ ಮಂಗಳೂರಿನಲ್ಲಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯುತ್ತಿದ್ದು, ಬಿಜೆಪಿ ರಾಜ್ಯದ್ಯಕ್ಷರು ಹಾಗೂ ನಮ್ಮ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರ ಮಾರ್ಗದರ್ಶನದಂತೆ ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.
ಗುರುವಾರ ಬೆಳಗ್ಗಿನಿಂದ ಸಭೆ ಪ್ರಾರಂಭವಾಗಲಿದೆ. ಕಾರ್ಯಕಾರಿಣಿ ಸಭೆಗೆ ಆಗಮಿಸುವ ಎಲ್ಲಾ ನಾಯಕರ ವಾಸ್ತವ್ಯ, ವಾಹನ ನಿಲುಗಡೆ ಸೇರಿದಂತೆ ಪ್ರತಿಯೊಂದನ್ನು ಕೂಡ ವ್ಯವಸ್ಥಿತವಾಗಿ ಸಿದ್ಧಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾದ್ಯಕ್ಷ ನಳಿನ್ ಕುಮಾರ್ ಕಟೀಲ್,ಸಿ.ಟಿ ರವಿ, ಜಗದೀಶ್ ಶೆಟ್ಟರ್, ಕೆ.ಎಸ್ ಈಶ್ವರಪ್ಪ, ಪ್ರಹ್ಲಾದ್ ಜೋಶಿ, ಸದಾನಂದ ಗೌಡ,ಆರ್ ಅಶೋಕ್, ಅರವಿಂದ ಲಿಂಬಾವಳಿ, ಗೋವಿಂದ ಕಾರಜೋಳ,ಅರುಣ್ ಕುಮಾರ್ ಸೇರಿದಂತೆ ಅನೇಕ ಪ್ರಮುಖರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.