- Advertisement -
ವಿಟ್ಲ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿಯಲ್ಲಿರುವ ಕೆ.ಜೆ. ಟವರ್ಸ್ನಲ್ಲಿರುವ ಎಂ.ಪಿ. ಹಾರ್ಡ್ ವೇರ್ ಮತ್ತು ಪೇಂಟ್ ಅಂಗಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಅಂಗಡಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.
ಆರಂಭದಲ್ಲಿ ಪೇಂಟ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಸ್ಥಳೀಯರು ಅಂಗಡಿ ಮಾಲೀಕರಿಗೆ ಮಾಹಿತಿ ನೀಡಿದ್ದಾರೆ. ನಂತರದಲ್ಲಿ ಪಕ್ಕದಲ್ಲಿದ್ದ ಬೇಕರಿಗೂ ಬೆಂಕಿ ವ್ಯಾಪಿಸಿದೆ. ಇದರಿಂದಾಗಿ ಎರಡೂ ಅಂಗಡಿಗಳು ಸುಟ್ಟುಹೋಗಿವೆ.