ಬಂಟ್ವಾಳ: ಮಂಗಳೂರು- ಬೆಂಗಳೂರು ಸಂಚರಿಸುವ ಖಾಸಗಿ ಬಸ್ಸಿನಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ಪಾಣೆಮಂಗಳೂರಿನ ಹಳೆ ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ.
ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ಹಾಸನ ಜಿಲ್ಲೆಯ ಕುಮಾರ್ ಎಂದು ಗುರುತಿಸಲಾಗಿದೆ. ಈತ ಮಂಗಳೂರು- ಬೆಂಗಳೂರು ಸಂಚರಿಸುವ ಖಾಸಗಿ ಬಸ್ಸಿನಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಈತನನ್ನುಸ್ಥಳೀಯ ಯುವಕರ ತಂಡ ರಕ್ಷಿಸಿದ್ದು ಸದ್ಯ ಬಂಟ್ವಾಳ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇಂದು ಬೆಳಿಗ್ಗೆ 8.15 ರ ಸುಮಾರಿಗೆ ತನ್ನ ಖಾಕಿ ಸಮವಸ್ತ್ರ ಧರಿಸಿಕೊಂಡೇ ಯುವಕ ಸೇತುವೆಯ ಮೇಲಿಂದ ನದಿಗೆ ಹಾರಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾನೆ. ಇದನ್ನು ಕಂಡ ಸ್ಥಳೀಯರು ಈಜುಗಾರ ಮಹಮ್ಮದ್ ಅವರಿಗೆ ಮಾಹಿತಿ ತಿಳಿಸಿದ್ದಾರೆ. ದೋಣಿಯ ಮೂಲಕ ತೆರಳಿದ ಮಹಮ್ಮದ್ ಯುವಕನ್ನು ನೀರಿನಿಂದ ಮೇಲಿದ್ದು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಕಾರ್ಯಚರಣೆಯಲ್ಲಿ ಮಹಮ್ಮದ್ ಅವರಿಗೆ ಶಿಹಾಬ್ ಮತ್ತು ಸ್ವಾಲಿ ಎಂಬ ಇಬ್ಬರು ಯುವಕರು ಸಹಕಾರ ನೀಡಿದ್ದಾರೆ.