Thursday, March 23, 2023
Homeರಾಜಕೀಯಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ದ.ಕ ಜಿಲ್ಲೆಯ ವಿವಿಧ ಸಮಸ್ಯೆಗಳ ಕುರಿತು ಮಾನ್ಯ ಮುಖ್ಯಮಂತ್ರಿಗೆ ಮನವಿ

ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ದ.ಕ ಜಿಲ್ಲೆಯ ವಿವಿಧ ಸಮಸ್ಯೆಗಳ ಕುರಿತು ಮಾನ್ಯ ಮುಖ್ಯಮಂತ್ರಿಗೆ ಮನವಿ

- Advertisement -


Renault

Renault
Renault

- Advertisement -

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಸಮಸ್ಯೆಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರ ನಿಯೋಗ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.


ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಹಾನಿಯ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚಿಸಿರುವ ನಿಯೋಗವು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಿಂದ ಬಹಳಷ್ಟು ಹಾನಿಯಾಗಿದೆ. ಹಾನಿಗೊಳಗಾದ ಕುಟುಂಬಗಳಿಗೆ ಪರಿಹಾರ ಧನ ನೀಡುವ ಬಗ್ಗೆ ಲಿಖಿತ ಮನವಿ ಸಲ್ಲಿಸಿದ್ದಾರೆ.

ಕರಾವಳಿಯ ಮೂರು ಜಿಲ್ಲೆಗಳಿಗೆ ಪ್ರತ್ಯೇಕ ಮರಳು ನೀತಿ ಜಾರಿಗೆ ತರಬೇಕು ಹಾಗೂ ಮರಳು ಗಣಿಗಾರಿಕೆ ನಿಯಮಗಳಿಗೆ ತಿದ್ದುಪಡಿ ತರಬೇಕು ಎಂದು ಕರಾವಳಿ ಶಾಸಕರು ಮನವಿ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಶಾಸಕ ಅಂಗಾರ, ದಕ್ಷಿಣ ಶಾಸಕ ಡಿ.ವೇದವ್ಯಾಸ್ ಕಾಮತ್, ಉತ್ತರ ಶಾಸಕ ಡಾ ಭರತ್ ಶೆಟ್ಟಿ, ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್, ಪುತ್ತೂರು ಶಾಸಕ ಸಂಜೀವ ಮಠಂದೂರು, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಪಸ್ಥಿತರಿದ್ದರು.

- Advertisement -

LEAVE A REPLY

Please enter your comment!
Please enter your name here

spot_img

Most Popular

Recent Comments