Monday, October 2, 2023
Homeಕರಾವಳಿಜೀವ ಸಂಕುಲಕ್ಕೆ ಪ್ಲಾಸ್ಟಿಕ್ ಮಾರಕ- ದೇಲಂಪಾಡಿ

ಜೀವ ಸಂಕುಲಕ್ಕೆ ಪ್ಲಾಸ್ಟಿಕ್ ಮಾರಕ- ದೇಲಂಪಾಡಿ

- Advertisement -Renault

Renault
Renault

- Advertisement -

ಮಂಗಳೂರು : ತಣ್ಣೀರುಬಾವಿಯ ಫಾತಿಮಾ ಬೀಚ್‍ನ ಕಡಲತೀರದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಉಳ್ಳಾಲ ಘಟಕ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೌರರರಕ್ಷಣಾ ಪಡೆಯವ ತಿಯಿಂದ ನವೆಂಬರ್ 8 ರಂದು ಸ್ವಚ್ಛತಾ ಕಾರ್ಯಕ್ರಮ ಮತ್ತು  ಪ್ರಾಣಾಯಾಮ, ಯೋಗ ಶಿಬಿರ ಕಾರ್ಯಕ್ರಮವು ನಡೆಯಿತು.

ದ.ಕ  ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರು ಮತ್ತು ಜಿಲ್ಲಾ ಪೌರರಕ್ಷಣಾ ಪಡೆಯ ಚೀಫ್‍ವಾರ್ಡನ್ ಡಾ|| ಮುರಳಿ ಮೋಹನ್ ಚೂಂತಾರು ಮಾತನಾಡಿ ಡಲತೀರದಲ್ಲಿ ಪರಿಸರ ಸ್ವಚ್ಛವಾಗಿಡಲು ಪ್ಲಾಸ್ಟಿಕ್ ತ್ಯಾಜ್ಯ, ಬಾಟಲುಗಳ ತ್ಯಾಜ್ಯಗಳು ಮೀನುಗಳ ಸಹಿತ ಅನೇಕ ಜೀವ ಸಂಕುಲದ ರಕ್ಷಣೆಗೆ ಮಾರಕವಾಗಿದ್ದು, ಅವುಗಳನ್ನು ಸಮುದ್ರಕ್ಕೆ ಎಸೆಯದಂತೆ ಸಮುದ್ರ ತೀರದಲ್ಲಿ  ಪ್ರವಾಸಿಗರಿಗೆ  ಸೂಕ್ತ ಮಾರ್ಗದರ್ಶನ ಹಾಗೂ ಕಸದ ತೊಟ್ಟಿಗಳನ್ನು ಅಲ್ಲಲ್ಲಿ  ಇಡುವುದರ ಮುಖಾಂತರ ತ್ಯಾಜ್ಯಗಳು ಸಮುದ್ರದ ನೀರಿಗೆ  ಬೀಳದಂತೆ  ಜಾಗೃತೆಯನ್ನು ವಹಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಗೃಹರಕ್ಷಕ ದಳದ  ಸಿಬ್ಬಂದಿಗಳಾದ ಸುನಿಲ್ ಕುಮಾರ್, ದಿವಾಕರ್, ಸುನಿಲ್, ನಿಶಾಲ್,  ದುಶ್ಯಂತ್ ರೈ, ಅಂಜನ್, ಸರಸ್ವತಿ, ಕವಿತಾ  ಹಾಗೂ ಇನ್ನಿತರ  ಗೃಹರಕ್ಷಕ/ಗೃಹರಕ್ಷಕಿಯರು ಹಾಜರಿದ್ದರು.

- Advertisement -

LEAVE A REPLY

Please enter your comment!
Please enter your name here

Most Popular

Recent Comments