Saturday, September 30, 2023
Homeರಾಜಕೀಯಡಿ.ಕೆ. ಶಿವಕುಮಾರ್ ಪುತ್ರಿ ಐಶ್ವರ್ಯಾ- ಅಮರ್ತ್ಯ ಹೆಗ್ಡೆ ನಿಶ್ಚಿತಾರ್ಥ

ಡಿ.ಕೆ. ಶಿವಕುಮಾರ್ ಪುತ್ರಿ ಐಶ್ವರ್ಯಾ- ಅಮರ್ತ್ಯ ಹೆಗ್ಡೆ ನಿಶ್ಚಿತಾರ್ಥ

- Advertisement -



Renault

Renault
Renault

- Advertisement -

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪುತ್ರಿ ಐಶ್ವರ್ಯ ಮತ್ತು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಮೊಮ್ಮಗ, ಕೆಫೆ ಕಾಫಿ ಡೇ ಮಾಲಿಕ ದಿವಗಂತ ವಿ ಜಿ ಸಿದ್ಧಾರ್ಥ್ ಅವರ ಹಿರಿಯ ಪುತ್ರ ಅಮರ್ತ್ಯ ಹೆಗ್ಡೆ ನಿಶ್ಚಿತಾರ್ಥ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪ ಖಾಸಗಿ ಹೊಟೆಲ್ ನಲ್ಲಿ ನೆರವೇರಿತು.

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಸಚಿವರಾದ ಡಾ ಕೆ ಸುಧಾಕರ್, ಆರ್. ಅಶೋಕ್, ವಿ.ಸೋಮಣ್ಣ ಸೇರಿದಂತೆ ಹಲವು ಗಣ್ಯರು ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಎರಡೂ ಕುಟುಂಬಗಳ ಆಪ್ತ ಬಂಧುಗಳು, ಸ್ನೇಹಿತರು ಇಂದಿನ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ತಂದೆ ಸಿದ್ಧಾರ್ಥ್ ಹೆಗ್ಡೆ ನಿಧನದ ನಂತರ ಕಾಫಿ ಡೇ ಉದ್ಯಮವನ್ನು ಅಮರ್ತ್ಯ ಹೆಗ್ಡೆ ನೋಡಿಕೊಳ್ಳುತ್ತಿದ್ದು, ಡಿ ಕೆ ಶಿವಕುಮಾರ್ ಪುತ್ರಿ ಐಶ್ವರ್ಯ ತಮ್ಮ ತಂದೆ ಸ್ಥಾಪಿಸಿರುವ ಎಂಜಿನಿಯರಿಂಗ್ ಕಾಲೇಜು ಗ್ಲೋಬಲ್ ಟೆಕ್ನಾಲಜಿ ಅಕಾಡೆಮಿಯ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ.

- Advertisement -

LEAVE A REPLY

Please enter your comment!
Please enter your name here

Most Popular

Recent Comments