- Advertisement -
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ 95 ಹೊಸ ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 30242ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಈವರೆಗೆ 2,61,002 ಕ್ಕೂ ಹೆಚ್ಚು ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಅದರಲ್ಲಿ 2,30,760 ಮಾದರಿಗಳು ನೆಗೆಟಿವ್ ಆಗಿದೆ.
ಇನ್ನು ಇಂದು 171 ಮಂದಿ ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 27,812 ಕ್ಕೆ ತಲುಪಿದೆ.
ಇಂದು ಒಂದು ಸಾವು ಸೇರಿದಂತೆ ಈವರೆಗೆ ಒಟ್ಟು 677 ಸಾವುಗಳು ಸಂಭವಿಸಿದೆ.