ಉಜಿರೆ: ಇನ್ನೂರು ವರ್ಷಗಳ ಭವ್ಯ ಇತಿಹಾಸವನ್ನು ಹೊಂದಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯು ಶುಕ್ರವಾರದಿಂದ ಯಕ್ಷಗಾನ ಸೇವೆ ಬಯಲಾಟ ಪ್ರದರ್ಶನ ಪ್ರಾರಂಭಿಸಿದೆ.
ಕಳೆದ ಐದು ವರ್ಷಗಳಿಂದ ಪ್ರತಿದಿನ ಸಂಜೆ 7 ರಿಂದ ರಾತ್ರಿ 12ರ ವರೆಗೆ ಕಾಲಮಿತಿ ಯಕ್ಷಗಾನ ಪ್ರದರ್ಶನ ನೀಡುತ್ತಿದ್ದು ಇದಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ದೊರಕಿದೆ. ಕಲಾವಿದರಿಗೂ ವಿಶ್ರಾಂತಿ ಹಾಗೂ ಹೆಚ್ಚಿನ ಅಧ್ಯಯನ, ಅಭ್ಯಾಸಕ್ಕೆ ಅವಕಾಶವಿದೆ. ಉದ್ಯೋಗದಲ್ಲಿರುವವರು, ವ್ಯವಹಾರ ನಡೆಸುವವರು ಹಾಗೂ ವಿದ್ಯಾರ್ಥಿಗಳು ಕೂಡಾ ಕಾಲಮಿತಿ ಯಕ್ಷಗಾನವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
2021ರ ಮೇ 23 ರ ವರೆಗೆ ಧರ್ಮಸ್ಥಳ ಭಕ್ತರು ಹಾಗೂ ಅಭಿಮಾನಿಗಳು ತಮ್ಮ ಊರಿನಲ್ಲಿ ಸೇವೆ ಬಯಲಾಟ ಪ್ರದರ್ಶನ ಆಯೋಜಿಸಿದ್ದಾರೆ.
2021ರ ಮೇ 24 ರಿಂದ 27ರ ವರೆಗೆ ಧರ್ಮಸ್ಥಳದಲ್ಲಿ ಮೂರು ದಿನ ಸೇವೆ ಬಯಲಾಟ ಪ್ರದರ್ಶನ ನೀಡಿ ವರ್ಷದ ತಿರುಗಾಟಕ್ಕೆ ಕಲಾವಿದರು ಮಂಗಳ ಹಾಡುವರು.
ಶುಕ್ರವಾರ ಬೆಳಿಗ್ಗೆ ಶುಭ ಮುಹೂರ್ತದಲ್ಲಿ ಯಕ್ಷಗಾನ ಮೇಳದ ಶ್ರೀ ಮಹಾಗಣಪತಿ ದೇವರಿಗೆ ಪೂಜೆ ನೆರೆವೇರಿಸಿ ಭವ್ಯ ಮೆರವಣಿಗೆಯಲ್ಲಿ ಭಕ್ತಿಪೂರ್ವಕವಾಗಿ ಕಳುಹಿಸಿಕೊಡಲಾಯಿತು.
೨೦೨೧ರ ಮೇ ೨೩ರ ವರೆಗೆ ಯಕ್ಷಗಾನ ಮೇಳದ ಕಲಾವಿದರು ಬೇರೆ-ಬೇರೆ ಊರುಗಳಲ್ಲಿ ಸೇವೆ ಬಯಲಾಟ ಪ್ರದರ್ಶನ ನೀಡುವರು.
ಧರ್ಮಸ್ಥಳ ಯಕ್ಷಗಾನ ಮಂಡಳಿ – ಸೇವೆ ಬಯಲಾಟ ಪ್ರದರ್ಶನ ಪ್ರಾರಂಭ
- Advertisement -
Recent Comments
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಮಾಡಿ ಕೇಂದ್ರ ಸರ್ಕಾರ ಖಜಾನೆ ತುಂಬಿಸಿಕೊಳ್ಳುತ್ತಿದೆ : ಮಾಜಿ ಸಚಿವ ಯು.ಟಿ ಖಾದರ್
on
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಮಾಡಿ ಕೇಂದ್ರ ಸರ್ಕಾರ ಖಜಾನೆ ತುಂಬಿಸಿಕೊಳ್ಳುತ್ತಿದೆ : ಮಾಜಿ ಸಚಿವ ಯು.ಟಿ ಖಾದರ್
on
ಮಂಗಳೂರಿನಲ್ಲೊಬ್ಬ ಸೋನು ಸೂದ್ : ಪನಾಮ ಕಾರ್ಪೋರೇಷನ್ ಲಿಮಿಟೆಡ್ ನ ಚೇರ್ಮನ್ ಮತ್ತು ಸಿ. ಇ. ಒ ವಿವೇಕ್ ರಾಜ್ ಪೂಜಾರಿ
on
ದೇಶವಿದೇಶಗಳಲ್ಲಿ ವೈರಲ್ ಆಗುತ್ತಿದೆ ಈ ವೀಡಿಯೋ : ಅಂಬಾನಿ ತನ್ನ ಘನತೆಗಾಗಿ ದೇಶದ ಘನತೆಯನ್ನು ಕುಗ್ಗಿಸುತ್ತಿದ್ದಾರೋ…!
on