ಮಂಗಳೂರು : ಬಹಳ ವರ್ಷಗಳ ಬಳಿಕ ಬಿಜೆಪಿ ಕಾರ್ಯಕಾರಿಣಿ ಸಭೆ ಮಂಗಳೂರಿನಲ್ಲಿ ನಡೆಯಲಿದೆ. ನಳಿನ್ ಕುಮಾರ್ ಕಟೀಲು ಅವರು ರಾಜ್ಯಾಧ್ಯಕ್ಷರಾದ ಬಳಿಕ ಎಲ್ಲಾ ಜಿಲ್ಲೆಗಳನ್ನು ಸುತ್ತಾಡಿ ಪಕ್ಷವನ್ನು ಬಲಪಡಿಸುವಲ್ಲಿ ಶ್ರಮಿಸಿದ್ದಾರೆ. ನಾಳೆ ಅವರ ಅಧ್ಯಕ್ಷತೆಯಲ್ಲಿ ರಾಜ್ಯದ ಪರಿಸ್ಥಿತಿ ಬಗ್ಗೆ ಬೇರೆ ಸಮಸ್ಯೆಗಳ ಬಗ್ಗೆ ಚರ್ಚೆಗಳು ನಡೆಯಲಿದೆ. ಅಲ್ಲದೆ ಮುಂದೆ ಎರಡೂವರೆ ವರ್ಷಗಳ ಬಳಿಕ ನಡೆಯುವ ಚುನಾವಣೆಯಲ್ಲಿಯೂ ಬಿಜೆಪಿ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಬೇಕು. ಆ ದಿಕ್ಕಿನಲ್ಲಿ ಪಕ್ಷವನ್ನು, ಸಂಘಟನೆಯನ್ನು ಬಲಪಡಿಸುವ ಮಹತ್ವದ ಬಗ್ಗೆಯೂ ಚರ್ಚೆಗಳು ನಡೆಯಲಿದೆ ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಅವರು ನವೆಂಬರ್ 5 ರಂದು ನಡೆಯಲಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಗೆ ಆಗಮಿಸಿದ ಸಂಧರ್ಭ ಮಂಗಳೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಅವರು ರಾಜ್ಯದಲ್ಲಿ ಈಗಾಗಲೇ ನಡೆದ ಶಿರಾ ಹಾಗೂ ಆರ್ ಆರ್ ನಗರದ ಉಪ ಚುನಾವಣೆಯಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ದಯಾನೀಯವಾಗಿ ಸೋಲನುಭವಿಸಲಿದೆ ಹೇಳಿದರು.
ಉಪಮುಖ್ಯಮಂತ್ರಿ ಗೋವಿಂದ್ ಎಂ ಕಾರಜೋಳ್ , ಕಂದಾಯ ಸಚಿವ ಆರ್ ಅಶೋಕ್, ಸಚಿವ ಈಶ್ವರಪ್ಪ, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಂಗಳೂರು ಉತ್ತರ ಶಾಸಕ ಡಾ.ಭಾರತ್ ವೈ ಶೆಟ್ಟಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡಬಿದ್ರೆ, ಶಾಸಕ ಉಮಾನಾಥ ಕೋಟ್ಯಾನ್, ಪುತ್ತೂರು ಶಾಸಕ ಸಂಜೀವ ಮಠಂದೂರು ಮತ್ತು ಇತರರು ಉಪಸ್ಥಿತರಿದ್ದರು.