Tuesday, June 6, 2023
Homeಕರಾವಳಿಪತಿ ಹಾಗೂ ಪತಿ ಮನೆಯವರ ಕಿರುಕುಳ, ಗೃಹಿಣಿ ಆತ್ಮಹತ್ಯೆ

ಪತಿ ಹಾಗೂ ಪತಿ ಮನೆಯವರ ಕಿರುಕುಳ, ಗೃಹಿಣಿ ಆತ್ಮಹತ್ಯೆ

- Advertisement -


Renault

Renault
Renault

- Advertisement -

ಕಾಸರಗೋಡು : ಪತಿ ಹಾಗೂ ಪತಿ ಮನೆಯವರ ಕಿರುಕುಳದಿಂದ ಬೇಸತ್ತು ಗೃಹಿಣಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುತ್ತಿಕೋಲ್ ನಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ಕುತ್ತಿಕೋಲು ಪಂಚಾಯತ್ ಸದಸ್ಯ ಜೋಸ್ ರವರ ಪತ್ನಿ ಜಿನೋ ( 35) ಎಂದು ಗುರುತಿಸಲಾಗಿದೆ.

ನಾಲ್ಕು ದಿನಗಳ ಹಿಂದೆ ವಿಷ ಸೇವಿಸಿದ್ದ ಜಿನೋ ರವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದು , ಪತಿ ಹಾಗೂ ಪತಿ ಮನೆಯವರ ಕಿರುಕುಳದಿಂದ ಬೇಸತ್ತು ವಿಷ ಸೇವನೆ ಮಾಡಿದ್ದಾಗಿ ಆರೋಪಿಸಲಾಗಿದೆ.

ಜಿನೋ ಅವರ ಸಹೋದರ ಜೋಬಿ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

LEAVE A REPLY

Please enter your comment!
Please enter your name here

Most Popular

Recent Comments