Saturday, June 3, 2023
Homeಕರಾವಳಿಪ್ರಸವಪೂರ್ವ ಭ್ರೂಣಲಿಂಗ ಪತ್ತೆ ಕಾನೂನು ಬಾಹಿರ ಅಪರಾಧ-ಡಾ. ರಾಮಚಂದ್ರ ಬಾಯಾರಿ

ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ಕಾನೂನು ಬಾಹಿರ ಅಪರಾಧ-ಡಾ. ರಾಮಚಂದ್ರ ಬಾಯಾರಿ

- Advertisement -


Renault

Renault
Renault

- Advertisement -


ಮಂಗಳೂರು : ಗರ್ಭಪೂರ್ವ ಮತ್ತು ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ಕಾನೂನು ಬಾಹಿರ ಹಾಗೂ ಶಿಕ್ಷಾರ್ಹ ಅಪರಾಧ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಮಚಂದ್ರ ಬಾಯರಿ ತಿಳಿಸಿದರು.

ಅವರು ಇಂದು ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾ ಕಚೇರಿ ಸಭಾಂಗಣದಲ್ಲಿ ಪಿ.ಸಿ & ಪಿ.ಎನ್.ಡಿ.ಟಿ. ಜಿಲ್ಲಾ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಗರ್ಭಪೂರ್ವ ಮತ್ತು ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ಕಾನೂನು ಬಾಹಿರ ಅಪರಾಧವಾಗಿದ್ದು, ಮೊದಲಿನ ಅಪರಾಧಕ್ಕೆ ಮೂರು ವರ್ಷ ಜೈಲು ಶಿಕ್ಷೆ ಹಾಗೂ ರೂ. 10,000/ ದಂಡ ವಿಧಿಸಲಾಗುವುದು. 2ನೇ ಅಪರಾಧಕ್ಕೆ 5 ವರ್ಷ ಜೈಲು ಶಿಕ್ಷೆ ಹಾಗೂ ರೂ.50,000/ ದಂಡ ವಿದಿಸಲಾಗುವುದು ಎಂದರು.
ಸ್ಕ್ಯಾನಿಂಗ್ ಸೆಂಟರ್‍ಗಳು ಪ್ರತೀ ವರ್ಷ ನಿಗದಿತ ದಿನಾಂಕದೊಳಗೆ ತಮ್ಮ ಪರವಾನಿಗೆಯನ್ನು ನವೀಕರಣಗೊಳಸಿಬೇಕು, ಇಲ್ಲದಿದ್ದರೆ ಅಂತಹ ಸ್ಕ್ಯಾನಿಂಗ್ ಸೆಂಟರ್‍ಗಳನ್ನು ನಿರ್ದಾಕ್ಷ್ಯಿಣ್ಯವಾಗಿ ಸೀಸ್ ಮಾಡಬೇಕು ಎಂದ ಅವರು, ಸರಕಾರ ನೀಡುವ ಮಾರ್ಗಸೂಚಿ ಅನುಸಾರ ಅಗತ್ಯ ದಾಖಲಾತಿ ಹಾಗೂ ನೊಂದಣಿ (ರಿಜಿಸ್ಟ್ರರ್) ಕಡತಗಳನ್ನು ಕಡ್ಡಾಯವಾಗಿ ನಿರ್ವಹಣೆ ಮಾಡಬೇಕು ಎಂದರು.
ಸಮಿತಿಯ ಸದಸ್ಯರು ಆಗಿಂದ್ದಾಗೆ ಸ್ಕ್ಯಾನಿಂಗ್ ಸೆಂಟರ್‍ಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಕಡತಗಳ ನಿರ್ವಹಣೆಯ ಪರಿಶೀಲನೆ ಮಾಡಬೇಕು. ಸರಕಾರದ ನಿಯಮಾನುಸಾರ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಸೌಲಭ್ಯ ಹೊಂದಿರುವ ಎಲ್ಲಾಚಿಕಿತ್ಸಾಲಯಗಳು ಜೆನಿಟಿಕ್ ಕ್ಲಿನಿಕ್‍ಗಳು ಹಾಗೂ ಜೆನಿಟಿಕ್ ಪ್ರಯೋಗಾಲಯಗಳು ಸಂಬಂಧಪಟ್ಟ ಜಿಲ್ಲಾ ಸಕ್ಷಮ ಪ್ರಾಧಿಕಾರದಲ್ಲಿ ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗಿದೆ. ಇಲ್ಲದಿದ್ದಲ್ಲಿ ಅವರ ಮೇಲೂ ಕಾನೂನಿನಡಿಯಲ್ಲಿ ಕ್ರಮಕೈಗೊಳ್ಳಲಾಗುವುದು ಎಂದರು.

ಸಭೆಯಲ್ಲಿ ಜಿಲ್ಲಾ ತಪಾಸಣ ಮತ್ತು ಮೇಲ್ವಿಚಾರಣಾ ಸಮಿತಿಯ ಅಧ್ಯಕ್ಷೆ ದ.ಕ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ(ಪ್ರಭಾರ) ಡಾ. ದೀಪಾ, ಸದಸ್ಯ ಕಾರ್ಯದರ್ಶಿ, ರೇಡಿಯಾಲಜಿಸ್ಟ್ ಜಿಲ್ಲಾ ವೆನ್‍ಲಾಕ್ ಆಸ್ಪತ್ರೆ, ಅನಿತ್‍ರಾಜ್ ಭಟ್, ಸಮಿತಿ ಸದ್ಯರಾದ ಐ.ಅರ್.ಐ.ಎ ಸದಸ್ಯ ಕಾರ್ಯದರ್ಶಿ ಡಾ. ಚಿದಾನಂದ ಮೂರ್ತಿ, ಎಫ್.ಒ.ಜಿ.ಎಸ್.ಐ ಪ್ರತಿನಿಧಿ ಡಾ. ಅಮೃತ ಭಂಡಾರಿ, ಮಂಗಳೂರು ಸೆಂಟರ್ ಫಾರ್ ಡೆವಲಪ್‍ಮೆಂಟ್ ಸ್ಟಡೀಸ್ & ಎಜುಕೇಶನ್ ನ ನಿರ್ದೇಶಕರಾದ ಡಾ. ರೀಟಾ ನೊರನ್ಹ, ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞೆ ಡಾ. ವತ್ಸಲ ಕಾಮತ್, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ. ಉಪಸ್ಥಿತರಿದ್ದರು.

- Advertisement -

LEAVE A REPLY

Please enter your comment!
Please enter your name here

Most Popular

Recent Comments