- Advertisement -
ಕಾಸರಗೋಡು : ಕಾಂಗ್ರೆಸ್ ಪಕ್ಷದ ಸಕ್ರಿಯ ಸದಸ್ಯ ಹಾಗೂ ಬದಿಯಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷ ಕೆ.ಎನ್ ಕೃಷ್ಣ ಭಟ್ ಇಂದು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಕಾಂಗ್ರೆಸ್ ಪಕ್ಷದ ಕೆಲ ಮುಖಂಡರ ಹಾಗೂ ಘಟಕ ಪಕ್ಷವಾದ ಮುಸ್ಲಿಂ ಲೀಗ್ ನ ಧೋರಣೆಯನ್ನು ಪ್ರತಿಭಟಿಸಿ ಕೆಲ ದಿನಗಳ ಹಿಂದೆ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು.
ಬಿಜೆಪಿ ಕರ್ನಾಟಕ ರಾಜ್ಯ ಉಪಾಧ್ಯಕ್ಷ ಮೋನಪ್ಪಭಂಡಾರಿರವರು ಕೃಷ್ಣ ಭಟ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.
ಈ ವೇಳೆ ಜಿಲ್ಲಾಧ್ಯಕ್ಷ ಕೆ. ಶ್ರೀಕಾಂತ್, ಸತೀಶ್ಚಂದ್ರ ಭಂಡಾರಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.