ಮಂಗಳೂರು : ಬೈಕಿಗೆ ದಾರಿ ಬಿಡಲಿಲ್ಲ ಎಂದು ದೇರಳಕಟ್ಟೆ ಬಳಿ ಇಬ್ಬರು ದುಷ್ಕರ್ಮಿಗಳು ಮಂಗಳೂರಿನಿಂದ ವಿಟ್ಲ ಕಡೆಗೆ ಹೋಗುತ್ತಿದ್ದ ಖಾಸಾಗಿ ಬಸ್ಸೊಂದನ್ನು ಅಡ್ಡಗಟ್ಟಿ ಡ್ರೈವರ್ ಮೇಲೆ ಕಲ್ಲೆಸೆದು ಬಸ್ಸಿನ ಗಾಜನ್ನು ಪುಡಿ ಮಾಡಿ ಹಾನಿಗೈದ ಘಟನೆ ಶನಿವಾರ ರಾತ್ರಿ ನಡೆದಿದೆ.
ಘಟನೆ ನಡೆದ ಕೂಡಲೇ ಸ್ಥಳದಲ್ಲಿ ಕೆಲಹೊತ್ತು ಬಿಗುವಿನ ವಾತಾವರಣ ನಿರ್ಮಾಣಗೊಂಡಿತು. ಆ ನಂತರ ರಾಣಿ ಅಬ್ಬಕ್ಕ ಬಸ್ಸು ನೌಕರರ ಸಂಘದ ಪದಾಧಿಕಾರಿಗಳು ಕೊಣಾಜೆ ಪೊಲೀಸ್ ಠಾಣೆಗೆ ದೂರು ನೀಡಿ, ದುಷ್ಕರ್ಮಿಗಳನ್ನು ಬಂಧಿಸುವಂತೆ ಒತ್ತಾಯಿಸಿದ್ದರು.
ತಕ್ಷಣ ಕಾರ್ಯ ಪ್ರವೃತ್ತರಾದ ಕೊಣಾಜೆ ಪೊಲೀಸರು ಘಟನೆ ನಡೆದ ಒಂದು ಗಂಟೆಯೊಳಗೆ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೊಣಾಜೆ ಪೊಲೀಸ್ ಅಧಿಕಾರಿಗಳ ಈ ಕ್ಷಿಪ್ರ ಕಾರ್ಯಾಚರಣೆಯನ್ನು ರಾಣಿ ಅಬ್ಬಕ್ಕ ಬಸ್ಸು ನೌಕರರ ಸಂಘದ ಪದಾಧಿಕಾರಿಗಳು ಶ್ಲಾಘಿಸಿದ್ದಾರೆ.