Sunday, May 28, 2023
Homeಕರಾವಳಿಬೊಕ್ಕಪಟ್ಣದಲ್ಲಿ ರೌಡಿಶೀಟರ್ ಬರ್ಬರವಾಗಿ ಕೊಲೆ

ಬೊಕ್ಕಪಟ್ಣದಲ್ಲಿ ರೌಡಿಶೀಟರ್ ಬರ್ಬರವಾಗಿ ಕೊಲೆ

- Advertisement -


Renault

Renault
Renault

- Advertisement -

ಮಂಗಳೂರು: ರೌಡಿಶೀಟರ್ ಒಬ್ಬನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಗರದ ಬೊಕ್ಕಪಟ್ಣದ ಕರ್ನಲ್ ಗಾರ್ಡನ್ ಬಳಿ ನಡೆದಿದೆ.

ಬೊಕ್ಕಪಟ್ಣ ನಿವಾಸಿ ಇಂದ್ರಜಿತ್ (45) ಕೊಲೆ ವ್ಯಕ್ತಿ. ಈತನನ್ನು ಬೊಕ್ಕಪಟ್ಣದ ಕರ್ನಲ್ ಗಾರ್ಡನ್ ಬಳಿ ಕೊಚ್ಚಿ ಕೊಲೆ ಮಾಡಲಾಗಿದೆ. ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ಮೃತದೇಹ ಪತ್ತೆಯಾಗಿದ್ದು, ನಿನ್ನೆ ರಾತ್ರಿ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ.

ಬುಧವಾರ ರಾತ್ರಿ ಈತನು ಮೆಹೆಂದಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದು ಅಲ್ಲಿ ಯಾವುದೋ ವಿಚಾರಕ್ಕೆ ಗಲಾಟೆ ನಡೆದಿದೆ ಎಂದು ತಿಳಿದು ಬಂದಿದೆ.

ಈ ಸಂಬಂಧ ಬರ್ಕೆ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ಈ ಕುರಿತು ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

LEAVE A REPLY

Please enter your comment!
Please enter your name here

Most Popular

Recent Comments