ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಖಾಸಗೀಕರಣವನ್ನು ವಿರೋಧಿಸಿ ಬಜ್ಪೆಯ ಕೆಂಜಾರ್ ಬಳಿ ಸೋಮವಾರ ಪ್ರತಿಭಟನೆ ನಡೆಯಿತು.
ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ (ಎಎಐ) ಅಧೀನದಲ್ಲಿದ್ದ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಕೇಂದ್ರ ಸರ್ಕಾರವು ಖಾಸಗೀಕರಣಗೊಳಿಸಿ ಅದಾನಿ ಗ್ರೂಪ್‌ಗೆ ನೀಡಿರುವುದನ್ನು ಖಂಡಿಸಿ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿದರು.
ದಕ್ಷಿಣ ಕನ್ನಡ ಜಿಲ್ಲಾ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ ಹರೀಶ್ ಕುಮಾರ್, ಮಾಜಿ ಸಚಿವ ಅಭಯ ಚಂದ್ರ ಜೈನ್, ಮಾಜಿ ಶಾಸಕ ಜೆ.ಆರ್. ಲೋಬೊ, ಮೊಹಿಯುದ್ದೀನ್ ಬಾವಾ, ಐವನ್ ಡಿಸೋಜ, ಯುವ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಮಿಥುನ್ ರೈ ಮತ್ತಿತರರು ಇದ್ದರು.