Saturday, June 3, 2023
Homeಕರಾವಳಿಹತ್ತು ದಿನಗಳ ಉತ್ಸವ ಮಂಗಳೂರು ದಸರಾಕ್ಕೆ ತೆರೆ

ಹತ್ತು ದಿನಗಳ ಉತ್ಸವ ಮಂಗಳೂರು ದಸರಾಕ್ಕೆ ತೆರೆ

- Advertisement -


Renault

Renault
Renault

- Advertisement -

ಮಂಗಳೂರು : ಕೊರೋನಾ ಕಾರಣದಿಂದಾಗಿ ‘ನಮ್ಮ ದಸರಾ ನಮ್ಮ ಸುರಕ್ಷತೆ ಎಂಬ ಧ್ಯೇಯದೊಂದಿಗೆ ಆರಂಭ ಗೊಂಡ ಮಂಗಳೂರು ದಸರಾ ಸರಳವಾಗಿ ಆಚರಿಸಲಾಗಿದ್ದು, ಸೋಮವಾರ ಶಾರದೆಯ ವಿಸರ್ಜನೆಯೊಂದಿಗೆ ಸಮಾಪನ ಗೊಂಡಿತು.

ನವರಾತ್ರಿಯ ಒಂಬತ್ತು ದಿನಗಳ ಕಾಲ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ನವದುರ್ಗೆಯ ಮೂರ್ತಿಗಳಿಗೆ ವಿಶೇಷ ಪೂಜೆ ಸಲ್ಲಿಸಲಾಗಿತ್ತು. ಆರಾಧನೆಗೊಂಡ ನವದುರ್ಗೆಯರ ಮೂರ್ತಿಯ ಜಲಸ್ತಂಭನಾ ನಡೆದಿದೆ.

ಕೋವಿಡ್ ಗೈಡ್‌ಲೈನ್ಸ್ ಪ್ರಕಾರ ಅತ್ಯಂತ ಸರಳವಾಗಿ ಈ ಬಾರಿ ದಸರಾ ಉತ್ಸವ ನೆರವೇರಿದೆ.

ಈ ಹಿಂದಿನ ವರ್ಷಗಳಲ್ಲಿ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದಲ್ಲಿ ಆರಾಧನೆಗೊಂಡ ನವದುರ್ಗೆಯರ ಶೋಭಾಯಾತ್ರೆ ನಡೆಯುತ್ತಿತ್ತು. ಅದರ ಜೊತೆಗೆ ಅದ್ದೂರಿ ಟ್ಯಾಬ್ಲೋ ಮೂಲಕ ನಗರ ಪ್ರದಕ್ಷಿಣೆ ನಡೆದು ಮುಂಜಾನೆ ವೇಳೆಗೆ ದೇವಳದ ಕೆರೆಯಲ್ಲಿ ವಿಸರ್ಜನೆ ಮಾಡಲಾಗುತ್ತಿತ್ತು.

ಕೊರೋನಾ ಕಾರಣದಿಂದ ಮೆರವಣಿಗೆಯನ್ನು ರದ್ದುಗೊಳಿಸಲಾಗಿದೆ‌. ದೇವಸ್ಥಾನದಲ್ಲೇ ವಿಸರ್ಜನಾ ಪೂಜೆ ನೆರವೇರಿಸಲಾಗಿದೆ. ಹಾಗೂ ದೇವಸ್ಥಾನದ ಹೊರಾಂಗಣದಲ್ಲೇ ಪ್ರದಕ್ಷಿಣೆ ಹಾಕಿ ಕ್ಷೇತ್ರದ ಪುಷ್ಕರಣಿಯಲ್ಲಿ ವಿಸರ್ಜಿಸಲಾಗುತ್ತದೆ.

- Advertisement -

LEAVE A REPLY

Please enter your comment!
Please enter your name here

Most Popular

Recent Comments