ಕಾಸರಗೋಡು : ಗ್ರಾಹಕರಿಂದ ಠೇವಣಿ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಜೇಶ್ವರ ಶಾಸಕ ಎಂ.ಸಿ.ಕಮರುದ್ದೀನ್ ರನ್ನು ವಿಶೇಷ ತನಿಖಾ ತಂಡ ವಿಚಾರಣೆ ನಡೆಸುತ್ತಿದೆ.
ತನಿಖಾ ತಂಡದ ಮುಖ್ಯಸ್ಥ ವಿವೇಕ್ ಕುಮಾರ್ ನೇತೃತ್ವದಲ್ಲಿ ಜಿಲ್ಲಾ ಪೊಲೀಸ್ ತರಬೇತಿ ಕೇಂದ್ರದಲ್ಲಿ ವಿಚಾರಣೆ ನಡೆಯುತ್ತಿದೆ.
ಫ್ಯಾಶನ್ ಗೋಲ್ಡ್ ಜುವೆಲ್ಲರಿ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ 109 ಪ್ರಕರಣಗಳು ದಾಖಲಾಗಿವೆ. ಗ್ರಾಹಕರಿಂದ ಠೇವಣಿ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜುವೆಲ್ಲರಿ ಅಧ್ಯಕ್ಷರಾಗಿರುವ ಕಮರುದ್ದೀನ್ ಆರೋಪಿಯಾಗಿದ್ದು, ಸುಮಾರು 700ರಷ್ಟು ಗ್ರಾಹಕರಿಂದ 130 ಕೋಟಿ ರೂ.ಗೂ ಅಧಿಕ ಹಣ ಪಡೆದು ವಂಚಿಸಿರುವುದಾಗಿ ದೂರು ದಾಖಲಿಸಲಾಗಿದೆ.