- Advertisement -
ಮಧುರೈ: ತಮಿಳುನಾಡಿನ ಮಧುರೈನಲ್ಲಿ ಭಾರೀ ಬೆಂಕಿ ದುರಂತ ಸಂಭವಿಸಿದೆ. ಇಲ್ಲಿನ ಕಲ್ಲುಪಟ್ಟಿ ಪ್ರದೇಶದಲ್ಲಿನ ಪಟಾಕಿ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ನಂತರ ಐವರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ.
ಸುದ್ದಿ ತಿಳಿದ ಕೂಡಲೇ ಅಗ್ನಿಶಾಮಕ ದಳ ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ಕೈಗೊಂಡಿದ್ದಾರೆ. ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸಪಟ್ಟರು.