ಚೆನ್ನೈ : ಕರ್ನಾಟಕ ಕೇಡರ್‌ನ ಮಾಜಿ ಐಎಎಸ್ ಅಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ಅವರು ಸೋಮವಾರ ತಮಿಳುನಾಡಿನ ಚೆನ್ನೈನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದಾರೆ. ಭಾರತೀಯ ಪ್ರಜಾಪ್ರಭುತ್ವದ ಮೂಲಭೂತಕ್ಕೆ ರಾಜಿ ಮಾಡಲಾಗುತ್ತಿದೆ ಎಂದು ಆರೋಪಿಸಿ ನಾಗರಿಕ ಸೇವೆಯನ್ನು ತ್ಯಜಿಸಿದ ಒಂದು ವರ್ಷದ ನಂತರ ರಾಜಕೀಯಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.
ತಮಿಳುನಾಡಿನ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಉಸ್ತುವಾರಿ, ದಿನೇಶ್ ಗುಂಡೂ ರಾವ್ ಮತ್ತು ಎಐಸಿಸಿ ಕಾರ್ಯದರ್ಶಿಗಳಾದ ಸಂಜಯ್ ದತ್ ಮತ್ತು ಸಿರಿವೆಲ್ಲಾ ಪ್ರಸಾದ್ ಅವರ ಸಮ್ಮುಖದಲ್ಲಿ ಸೆಂಥಿಲ್ ಕಾಂಗ್ರೆಸ್ ಪಕ್ಷವನ್ನು ಸೇರಿದ್ದಾರೆ. 41 ವರ್ಷದ ಮಾಜಿ ಅಧಿಕಾರಿ 2009 ರಲ್ಲಿ ನಾಗರಿಕ ಸೇವೆಗೆ ಸೇರಿಕೊಂಡಿದ್ದರು ಮತ್ತು ಕರ್ನಾಟಕ ಕೇಡರ್‌ಗೆ ಸೇರಿದವರಾಗಿದ್ದರು.
“ನಮ್ಮ ವೈವಿಧ್ಯಮಯ ಪ್ರಜಾಪ್ರಭುತ್ವದ ಮೂಲಭೂತಗಳನ್ನು ಅಭೂತಪೂರ್ವ ರೀತಿಯಲ್ಲಿ ರಾಜಿ ಮಾಡಲಾಗುತ್ತಿದೆ” ಎಂದು ಆರೋಪಿಸಿ ಸಸಿಕಾಂತ್ ಸೆಂಥಿಲ್ ಕಳೆದ ಸೆಪ್ಟೆಂಬರ್‌ನಲ್ಲಿ ನಾಗರಿಕ ಸೇವೆಯನ್ನು ತ್ಯಜಿಸಿದರು. ಭಾನುವಾರ, ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರಲು ನಿರ್ಧರಿಸಿರುವುದಾಗಿ ಹೇಳಿದ್ದರು. ಅದು ಯಾವಾಗಲೂ ನನ್ನ ಸಂವಿಧಾನದ ಸಿದ್ಧಾಂತಗಳಿಗೆ ಅನುಗುಣವಾಗಿರುತ್ತದೆ” ಎಂದೂ ಸಾಮಾಜಿಕ ಜಾಲತಾಣದಲ್ಲಿ ಸಂದೇಶ ನೀಡಿದ್ದರು.
ಈ ವೇಳೆ ತಮಿಳುನಾಡು ಕಾಂಗ್ರೆಸ್ ಅಧ್ಯಕ್ಷರಾಗಿರುವ ಕೆ.ಎಸ್. ಅಳಗಿರಿ ಮತ್ತು ಇತರ ಹಿರಿಯ ನಾಯಕರು ಉಪಸ್ಥಿತರಿದ್ದರು” ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿದ್ದಾರೆ. ಸದ್ಯ, ದಿನೇಶ್ ಗುಂಡೂರಾವ್ ತಮಿಳುನಾಡು, ಪುದುಚೆರ್ರಿ ಹಾಗೂ ಗೋವಾದ ಎಐಸಿಸಿ ಉಸ್ತುವಾರಿಯಾಗಿದ್ದಾರೆ.