Monday, October 2, 2023
Homeಕರಾವಳಿಮಾಜಿ ಪ್ರಧಾನಿ ದೇವೇಗೌಡ ಕುಟುಂಬದ ಅವಹೇಳನದ ವಿರುದ್ಧ ಜೆಡಿಎಸ್ ಯುವ ಜಿಲ್ಲಾ ಅಧ್ಯಕ್ಷ ಆಕ್ಷಿತ್ ಸುವರ್ಣ...

ಮಾಜಿ ಪ್ರಧಾನಿ ದೇವೇಗೌಡ ಕುಟುಂಬದ ಅವಹೇಳನದ ವಿರುದ್ಧ ಜೆಡಿಎಸ್ ಯುವ ಜಿಲ್ಲಾ ಅಧ್ಯಕ್ಷ ಆಕ್ಷಿತ್ ಸುವರ್ಣ ನೇತ್ರತ್ವದಲ್ಲಿ ಮುತ್ತಿಗೆ

- Advertisement -



Renault

Renault
Renault

- Advertisement -

ಮಂಗಳೂರು: ದೇವೇಗೌಡರ ಕುಟುಂಬದ ಬಗ್ಗೆ ಅವಹೇಳನಕಾರಿ ಮಾತನಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ವಿರುದ್ದ ದಕ ಜಿಲ್ಲಾ ಯುವ ಜೆಡಿಎಸ್ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ ಅವರ ನೇತೃತ್ವದಲ್ಲಿ ಸರ್ಕಿಟ್ ಹೌಸ್ ಬಳಿ ಮುತ್ತಿಗೆ ಹಾಕಿ ಕಪ್ಪು ಬಾವುಟ ಪ್ರದರ್ಶಿಸಲಾಯಿತು.

ಈ ವೇಳೆ ಮಾತನಾಡಿದ ಅಕ್ಷಿತ್ ಸುವರ್ಣ ರಾಜ್ಯದ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ಹೆಸರು ಮಾಡಿರುವ ದೇವೆಗೌಡರ ಬಗ್ಗೆ ಕೀಳಾಗಿ ಮಾತನಾಡಿರುವ ನಳಿನ್ ಅವರ ವರ್ತನೆ ಖಂಡನೀಯ. ದೇಶದ ಪ್ರಧಾನಿಯಾಗಿ ಅವರು ನೀಡಿರುವ ಕೊಡುಗೆಯನ್ನು ನಳಿನ್ ಮರೆತಿರಬಹುದು ಆದರೆ ದೇಶದ ಜನರು ಮರೆತಿಲ್ಲ. ರಾಜಕೀಯದಲ್ಲಿ ತನ್ನದೇ ಕೊಡುಗೆ ನೀಡಿರುವ ದೇವೆಗೌಡರ ಕುಟುಂಬ ಹಾಗೂ ಜೆಡಿಎಸ್ ಪಕ್ಷದ ವಿರುದ್ದ ಲಘುವಾಗಿ ಮಾತನಾಡಿದ್ದು, ದೇವೆಗೌಡರ ಕೊಡುಗೆಯ ಕನಿಷ್ಠ ಒಂದು ಪಾಲು ಸೇವೆಯನ್ನು ನೀಡದ ಇವರಿಗೆ ಗೌಡರ ಕುಟುಂಬದ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ.

ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಶಾಸಕರನ್ನು ಖರೀದಿ ಮಾಡಿ ಅನೈತಿಕವಾಗಿ ಸರಕಾರ ರಚನೆ ಮಾಡಿದ್ದು ಬಿಟ್ಟರೆ ಇವರ ಸಾಧನೆ ಬೇರೆ ಏನು ಇಲ್ಲ. ಕೂಡಲೇ ಅವರು ದೇವೆಗೌಡರ ಕ್ಷಮೆಯನ್ನು ಯಾಚಿಸಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಅವರು ಭಾಗವಹಿಸುವ ಎಲ್ಲಾ ಕಾರ್ಯಕ್ರಮದಲ್ಲಿ ಕಪ್ಪು ಬಾವುಟ ಪ್ರದರ್ಶಿಸಲಾಗುವುದು ಎಂದರು.

ಯುವ ಜನತಾದಳ (ಜಾ) ದ.ಕ ಜಿಲ್ಲೆ ಇದರ ಮಂಗಳೂರು ಉತ್ತರ ವಿಧಾನಸಭಾ ಅಧ್ಯಕ್ಷ ಹಾಗು ಜಿಲ್ಲಾ ಸಂಘಟನಾ ಉಸ್ತುವಾರಿಯಾದ ರತೀಶ್ ಕರ್ಕೇರ, ಜಿಲ್ಲಾ ಹಿರಿಯ ಉಪಾಧ್ಯಕ್ಷ ಮೊಹಮ್ಮದ್ ಅಸಿಫ್ ,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಿತೇಶ್ ರೈ, ಮಂಗಳೂರು ದಕ್ಷಿಣ ಕ್ಷೇತ್ರ ಅಧ್ಯಕ್ಷ ಸತ್ತಾರ್ ಬಂದರು, ಹಾಗು ಯುವ ಪಧಾದಿಕಾರಿಗಳಾದ ನಿತೇಶ್ ಪೂಜಾರಿ, ವಿನಯ್, ಗೌತಮ್, ವಿನಿತ್, ರಿನಿತ್, ನಿಶಾಂತ್, ಗಗಾಣೀಶ್ ,ಪ್ರದೀಪ್ ಕೀರ್ತಿಕ್, ಪವನ್, ಧನುಷ್, ಸುಶಾಂತ್, ವಿನಯ್ ,ಜಯದೀಪ್ ಧನುಷ್ ಪೂಜಾರಿ ಮುಂತಾದವರು ಪಾಲ್ಗೊಂಡಿದ್ದರು

- Advertisement -

1 COMMENT

  1. ದೇವೇಗೌಡ. ಎಲ್ಲಿ …. ಈ ನಳಿನ್ ಕುಮಾರ್ ಎಲ್ಲಿ …? ಯಾಕೆ ಹೋಲಿಕೆ ಮಾಡ್ತಿರಿ…. ನೆಗ್ಲೆಕ್ಟ್ ಮಾಡಿ….

LEAVE A REPLY

Please enter your comment!
Please enter your name here

Most Popular

Recent Comments