ಮಂಗಳೂರು : ರಥಬೀದಿ ಮಹಮಾಯಿ ದೇವಸ್ಥಾನದ ಬಳಿಯಿಂದ ನವಭಾರತ್ ಸರ್ಕಲ್ ಸಂಪರ್ಕಿಸುವ ರಸ್ತೆಯ ವರೆಗೆ ಸ್ಮಾರ್ಟ್ ಸಿಟಿ ಯೋಜನೆಯಿಂದ ಒಳ ಚರಂಡಿ, ಫುಟ್ ಪಾತ್,ರಸ್ತೆ ಕಾಂಕ್ರೀಟಿಕರಣ ಹಾಗೂ ರಸ್ತೆಯ ಬದಿ ಚರಂಡಿ ನಿರ್ಮಾಣ ಕಾಮಗಾರಿ ಪ್ರಾರಂಭವಾಗಲಿದ್ದು ಸ್ಥಳಕ್ಕೆ ಶಾಸಕ ವೇದವ್ಯಾಸ ಕಾಮತ್ ರವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಮಾತನಾಡಿದ ಶಾಸಕ ಕಾಮತ್, ಕಾರ್ ಸ್ಟ್ರೀಟ್ ಮಹಮ್ಮಾಯಿ ದೇವಸ್ಥಾನದಿಂದ ನವಭಾರತ್ ಸಂಪರ್ಕಿಸುವ ರಸ್ತೆಯ ವರೆಗೆ ಸ್ಮಾರ್ಟ್ ಸಿಟಿ ಯೋಜನೆಯಡಿ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು. ಹೊಸದಾಗಿ ಒಳಚರಂಡಿ ಕಾಮಗಾರಿ, 9 ಮೀಟರ್ ಅಗಲದಲ್ಲಿ ಕಾಂಕ್ರೀಟ್ ರಸ್ತೆ, 1.5 ಮೀಟರ್ ಪುಟ್ ಪಾತ್, ಹಾಗೂ ರಸ್ತೆಯ ಇಕ್ಕೆಲಗಳಲ್ಲಿ ಮಳೆನೀರು ಹರಿದು ಹೋಗಲು ಚರಂಡಿ ನಿರ್ಮಿಸಲಾಗುತ್ತದೆ. ರಥೋತ್ಸವ ದಿನ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.
ಈ ಸಂದರ್ಭದಲ್ಲಿ, ಮನಪಾ ಮುಖ್ಯ ಸಚೇತಕರಾದ ಪ್ರೇಮಾನಂದ ಶೆಟ್ಟಿ,ಬಿಜೆಪಿ ಮುಖಂಡರಾದ ರಮೇಶ್ ಹೆಗ್ಡೆ, ಮುರಳೀಧರ್ ನಾಯಕ್, ವಸಂತ್ ಜೆ ಪೂಜಾರಿ, ಗಿರೀಶ್, ಮಹಮ್ಮಾಯಿ ದೇವಸ್ಥಾನದ ಶಿವ ಭಟ್, ಸ್ಥಳೀಯರು, ಬಿಜೆಪಿ ಕಾರ್ಯಕರ್ತರು ಹಾಗೂ ಸ್ಮಾರ್ಟ್ ಸಿಟಿ ಯೋಜನೆಯ ಅಧಿಕಾರಿಗಳು ಉಪಸ್ಥಿತರಿದ್ದರು.