Sunday, May 28, 2023
Homeಕರಾವಳಿರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಕೆ ಜಯಪ್ರಕಾಶ್ ಹೆಗ್ಡೆ

ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಕೆ ಜಯಪ್ರಕಾಶ್ ಹೆಗ್ಡೆ

- Advertisement -


Renault

Renault
Renault

- Advertisement -

ಉಡುಪಿ : ರಾಜ್ಯ ಹಿಂದುಳಿದ ವರ್ಗಗಳ ಅಯೋಗದ ಅಧ್ಯಕ್ಷರನ್ನಾಗಿ ಮಾಜಿ ಸಚಿವ ಕೆ.ಜಯಪ್ರಕಾಶ್ ಹೆಗ್ಡೆ ಅವರನ್ನು ನೇಮಿಸಲಾಗಿದೆ.

ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ರಾಜ್ಯಪಾಲರ ಆದೇಶಾನುಸಾರ ಅಧಿಸೂಚನೆ ಜಾರಿಮಾಡಿದ್ದಾರೆ. ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಜಯಪ್ರಕಾಶ್ ಹೆಗ್ಡೆ ಅವರು ಜೆ.ಎಚ್‌.ಪಟೇಲ್‌ ನೇತೃತ್ವದ ಜನತಾದಳ ಸರ್ಕಾರದಲ್ಲಿ ಮೀನುಗಾರಿಕೆ ಮತ್ತು ಬಂದರು ಖಾತೆ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ನಂತರ ಕಾಂಗ್ರೆಸ್ ಸೇರಿದ್ದರು.

ಉಡುಪಿ – ಚಿಕ್ಕಮಗಳೂರು ಸಂಸದರಾಗಿಯೂ ಆಯ್ಕೆಯಾಗಿದ್ದ ಜಯಪ್ರಕಾಶ್ ಹೆಗ್ಡೆ ಅವರು ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು.

- Advertisement -

LEAVE A REPLY

Please enter your comment!
Please enter your name here

Most Popular

Recent Comments