ಉಡುಪಿ, : ಮಣಿಪಾಲದಲ್ಲಿ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಡ್ರಗ್ಸ್ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯೋರ್ವನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಉಡುಪಿ ಎಸ್ಪಿ ವಿಷ್ಣುವರ್ಧನ ನೇತೃತ್ವದ ತಂಡ ದಾಳಿ ನಡೆಸಿ ಆರೋಪಿ ಹಾಗೂ ಲಕ್ಷಾಂತರ ಮೌಲ್ಯದ ನಿಷೇಧಿತ ಅಮಲು ಪದಾರ್ಥಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಕ್ರಮ ದಂಧೆಯಲ್ಲಿ ತೊಡಗಿದ ವ್ಯಕ್ತಿಯನ್ನು ಉಡುಪಿ ತಾಲೂಕಿನ ಬ್ರಹ್ಮಾವರದ ಮಹಮ್ಮದ್ ಫಝಲ್ ಎಂದು ಗುರುತಿಸಲಾಗಿದ್ದು, ಆತನನ್ನು ಬಂಧಿಸಲಾಗಿದೆ.
ಆರೋಪಿ ಮಣಿಪಾಲದ ವಿದ್ಯಾರ್ಥಿಗಳಿಗೆ ಮಾರಾಟ ಮಾಡಲೆಂದು ನಿಷೇಧಿತ ಎಂಡಿಎಂಎ ಮಾತ್ರೆಗಳು, ಬ್ರೌನ್ ಶುಗರ್ ಪತ್ತೆಯಾಗಿದ್ದು ಅವುಗಳನ್ನು ಪೊಲೀಸರು ವಶಪಡಿಸಿಕೊಂದಿದ್ದಾರೆ. ಅಲ್ಲದೇ ಮಾರಾಟ ಸಂವಹನಕ್ಕೆಂದು ಬಳಸಲಾಗುತ್ತಿದ್ದ ಎರಡು ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಳ್ಳಲಾದ ಡ್ರಗ್ಸ್ ಹಾಗೂ ಸೊತ್ತುಗಳ ಅಂದಾಜು ಮೌಲ್ಯ ನಾಲ್ಕು ಲಕ್ಷದ ಅರವತ್ತೆರಡು ಸಾವಿರ ರೂಪಾಯಿ ಎಂದು ಅಂದಾಜಿಸಲಾಗಿದೆ.