ತುಮಕೂರು : ತುಮಕೂರು ಜಿಲ್ಲೆಯ ಶಿರಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ. ರಾಜೇಶ್ ಗೌಡ ಜಯಭೇರಿ ಬಾರಿಸಿದ್ದಾರೆ. ಇದೇ ಮೊದಲ ಬಾರಿಗೆ ಶಿರಾ ಕ್ಷೇತ್ರದಲ್ಲಿ ಗೆಲ್ಲುವ ಮೂಲಕ ಬಿಜೆಪಿ ಇತಿಹಾಸ ನಿರ್ಮಾಣ ಮಾಡಿದೆ. ಶಿರಾ ಕ್ಷೇತ್ರದ ಉಪ ಚುನಾವಣೆ ಮತ ಎಣಿಕೆ ಮಂಗಳವಾರ ತುಮಕೂರು ನಗರದ ಪಾಲಿಟೆಕ್ನಕ್ ಕಾಲೇಜಿನಲ್ಲಿ ನಡೆಯಿತು. ಬಿಜೆಪಿಯ ಡಾ. ರಾಜೇಶ್ ಗೌಡ ಕಾಂಗ್ರೆಸ್‌ನ ಟಿ. ಬಿ. ಜಯಚಂದ್ರ ಅವರ ಪೈಪೋಟಿಯ ನಡುವೆಯೂ ಗೆಲುವು ಸಾಧಿಸಿದರು.
ಉಪ ಚುನಾವಣೆ ಮತ ಎಣಿಕೆ ವೇಳೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಪೈಪೋಟಿ ನಡೆಯಿತು. 2018ರ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಜೆಡಿಎಸ್ ಗೆಲುವು ಸಾಧಿಸಿತ್ತು. ಉಪ ಚುನಾವಣೆ ಸೋಲುವ ಮೂಲಕ ಜೆಡಿಎಸ್ ಕ್ಷೇತ್ರವನ್ನು ಕಳೆದುಕೊಂಡಿದೆ.
ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ 69,559 ಮತಗಳನ್ನು ಪಡೆದಿದ್ದಾರೆ. ಇವಿಎಂ ಕೌಂಟಿಂಗ್ ಮುಗಿದ ಬಳಿಕ ಬೂತ್‌ಗಳ ವಿವಿಪ್ಯಾಟ್ ಸ್ಲಿಪ್ ಎಣಿಕೆ ನಡೆಯಲಿದೆ. ಬಳಿಕ ಚುನಾವಣಾ ಆಯೋಗ ಅಭ್ಯರ್ಥಿ ಗೆಲುವಿನ ಬಗ್ಗೆ ಅಧಿಕೃತ ಘೋಷಣೆ ಮಾಡಲಿದೆ.