Sunday, May 28, 2023
Homeಕ್ರೈಂಶಿವಮೊಗ್ಗ ಗಲಭೆ : 62 ಮಂದಿ ಆರೋಪಿಗಳ ಬಂಧನ, ಕರ್ಫ್ಯೂ ಜಾರಿ

ಶಿವಮೊಗ್ಗ ಗಲಭೆ : 62 ಮಂದಿ ಆರೋಪಿಗಳ ಬಂಧನ, ಕರ್ಫ್ಯೂ ಜಾರಿ

- Advertisement -


Renault

Renault
Renault

- Advertisement -

ಶಿವಮೊಗ್ಗ: ಶಿವಮೊಗ್ಗದಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಜಾಗ್ರತಾ ಕ್ರಮವಾಗಿ ನಗರದ ಹಲವೆಡೆ ಕರ್ಫ್ಯೂ ಹೇರಲಾಗಿದ್ದು, 62 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ನಿನ್ನೆ ಶಿವಮೊಗ್ಗ ನಗರದಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ವರೆಗೂ 62 ಮಂದಿಯನ್ನು ಬಂಧಿಸಲಾಗಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ಕರ್ಫ್ಯೂ ಹೇರಲಾಗಿದೆ. ಈ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡಿದ ಪೂರ್ವ ವಲಯ ಐಜಿಪಿ ಎಸ್ .ರವಿ ಅವರು, ‘ನಗರದಲ್ಲಿ ಪರಿಸ್ಥಿತಿ ಸಂಪೂರ್ಣ ಹತೋಟಿಗೆ ಬಂದಿದೆ. ಶಾಂತಿ-ಸುವ್ಯವಸ್ಥೆ ನಿಯಂತ್ರಣದಲ್ಲಿದೆ, ಘಟನೆಯಲ್ಲಿ 19 ಮಂದಿ ಗಾಯಗೊಂಡಿದ್ದು, ದೊಡ್ಡಪೇಟೆ ಮತ್ತು ಕೋಟೆ ಮತ್ತು ತುಂಗಾ ನಗರಠಾಣೆ ವ್ಯಾಪ್ತಿಯಲ್ಲಿ 10 ಪ್ರಕರಣಗಳು ದಾಖಲಾಗಿವೆ. ನಾಗೇಶ್ ಹಲ್ಲೆ ಪ್ರಕರಣದ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಹೇಳಿದರು.

ಈಗಾಗಲೇ ಜಿಲ್ಲೆಯಲ್ಲಿ 148 ಸೂಕ್ಷ್ಮ, ಅತಿಸೂಕ್ಷ್ಮ ಪ್ರದೇಶಗಳನ್ನು ಗುರುತಿಸಲಾಗಿದ್ದು, ಬೇರೆ ಜಿಲ್ಲೆಗಳಿಂದ ಬರುವ ದುಷ್ಕರ್ಮಿಗಳನ್ನು ತಡೆಯಲು 9 ಕಡೆ ಚೆಕ್ ಪೋಸ್ಟ್ ಹಾಕಲಾಗಿದೆ. 19 ಮೊಬೈಲ್ ಗಸ್ತು ವಾಹನ ಹಾಗೂ 22 ಚಿತಾ ವಾಹನಗಳು ನಗರದಾದ್ಯಂತ ಗಸ್ತು ತಿರುಗುತ್ತಿವೆ. 3 ಪ್ಯಾಟ್ರೋಲ್ ವಾಹನ ಗಸ್ತು ತಿರುಗುತ್ತಿವೆ. ನಗರದಲ್ಲಿ ಶಾಂತಿ ಕಾಪಾಡುವ ಉದ್ದೇಶದಿಂದ ದಾವಣಗೆರೆ ಮತ್ತು ಚಿತ್ರದುರ್ಗ ವಲಯದ 1 ಸಾವಿರ ಪೊಲೀಸರನ್ನು ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿದೆ. ಅಂತೆಯೇ ಸಾರ್ವಜನಿಕರು ಯಾವುದೇ ರೀತಿಯ ವದಂತಿಗಳಿಗೆ ಕಿವಿಗೊಡಬೇಡಿ ಎಂದ ಅವರು, ಪರಿಸ್ಥಿತಿ ಬಿಗಡಾಯಿಸದಂತೆ ಪೊಲೀಸ್ ಇಲಾಖೆ ನೋಡಿಕೊಳ್ಳುತ್ತದೆ. ನಗರದಲ್ಲಿ ಶಾಂತಿ‌ ನೆಲೆಸಲು ಸಾರ್ವಜನಿಕರು ಪೊಲೀಸರೊಂದಿಗೆ ಸಹಕಾರ ನೀಡಬೇಕು ಎಂದು ಮನವಿಮಾಡಿದರು.

ಇದೇ ವೇಳೆ ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ಮಾತನಾಡಿ, ಡಿ.5 ರವರೆಗೆ ಕರ್ಪ್ಯೂ ಜಾರಿಯಲ್ಲಿರಲಿದ್ದು, ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡಬೇಡಿ. ಅಗತ್ಯ ವಸ್ತುಗಳ ಪೂರೈಕೆಯಲ್ಲಿ ಯಾವುದೇ ವತ್ಯಯವಾಗುವುದಿಲ್ಲ. ಅಗತ್ಯ ವಸ್ತುಗಳನ್ನು ಹೊರತು ಪಡಿಸಿ ಎಲ್ಲ ರೀತಿ ವಾಣಿಜ್ಯ ಚಟುವಟಿಕೆಗಳು ಸ್ಥಗಿತವಾಗಿವೆ ಎಂದು ಹೇಳಿದರು.

- Advertisement -

LEAVE A REPLY

Please enter your comment!
Please enter your name here

Most Popular

Recent Comments