Thursday, June 1, 2023
HomeUncategorizedಸಬ್ ರಿಜಿಸ್ಟ್ರಾರ್ ಕಚೇರಿಗೆ ಉಸ್ತುವಾರಿ ರಾತ್ರಿ ಭೇಟಿ!

ಸಬ್ ರಿಜಿಸ್ಟ್ರಾರ್ ಕಚೇರಿಗೆ ಉಸ್ತುವಾರಿ ರಾತ್ರಿ ಭೇಟಿ!

- Advertisement -


Renault

Renault
Renault

- Advertisement -

ಮಂಗಳೂರು ಜನವರಿ 17 : ಸಮಸ್ಯೆಗಳನ್ನು ಹೊದ್ದು ಮಲಗಿರುವ ಮಂಗಳೂರು ಸಬ್ ರಿಜಿಸ್ಟರ್ ಕಚೇರಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಧಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಳೆದ ಅನೇಕ ತಿಂಗಳಿನಿಂದ ಮಂಗಳೂರಿನ ಮಿನಿ ವಿಧಾನ ಸೌಧದಲ್ಲಿರುವ ಸಬ್ ರಿಜಿಸ್ಟರ್ ಆಫೀಸಿನಲ್ಲಿ ಉಂಟಾಗುತ್ತಿರುವ ಸಮಸ್ಯೆಗಳ ಕುರಿತಂತೆ ಸಾರ್ವಜನಿಕರಿಂದ ನಿತ್ಯ ದೂರುಗಳು ಬರ್ತಾ ಇದ್ದು, ಭೂ ನೋಂದಣಿಗಾಗಿ ಮಧ್ಯರಾತ್ರಿ 3 ಗಂಟೆ ಸುಮಾರಿಗೆ ಟೋಕನ್ ಗಾಗಿ ಸರತಿ ಸಾಲಿನಲ್ಲಿ ಅನಿವಾರ್ಯವಾಗಿ ನಿಲ್ಲಬೇಕಾಗಿತ್ತು. ಈ ಬಗ್ಗೆ ಸಾರ್ವಜನಿಕರು ಸ್ಥಳೀಯ ಶಾಸಕರುಗಳ ಗಮನಕ್ಕೆ ತಂದಿದ್ದರು.

ಈ ಹಿನ್ನಲೆಯಲ್ಲಿ ಶಾಸಕ ವೇದವ್ಯಾಸ್ ಕಾಮತ್, ಭರತ್ ಶೆಟ್ಟಿ, ಧೀರ್ಘಕಾಲದ ಸಮಸ್ಯೆಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಗಮನಕ್ಕೆ ತಂದಿದ್ದು, ಇಂದು ಸಚಿವರು ಡೀಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಅಧಿಕಾರಿಗಳೊಂದಿಗೆ ಸಾರ್ವಜನಿಕರೊಂದಿಗೆ ಖುದ್ದಾಗಿ ಮಾತನಾಡಿದರು. ರಾತ್ರಿ 8 ಗಂಟೆಯವರೆಗು ಕಚೇರಿಯಲ್ಲಿ ಕೆಲಸ ನಿರ್ವಹಿಸ್ತಾ ಇದ್ದು, ಸಮರ್ಪಕವಾಗಿಲ್ಲದ ಕಂಪ್ಯೂಟರೀಕೃತ ವ್ಯವಸ್ಥೆ . ಹಾಗೂ ಇತರ ತಾಂತ್ರಿಕ ಸಮಸ್ಯೆಗಳಿಗೆ ಸ್ಪಂದಿಸಲು ಹಾಗೂ ಜನರ ಆಶೋತ್ತರ ಗಳನ್ನು ಈಡೇರಿಸಲು ಆಗುತ್ತಿಲ್ಲ ಎಂದು ಸಚಿವರುಗಳಿಗೆ ಅಧಿಕಾರಿಗಳು ಅಳಲು ತೋಡಿಕೊಂಡರು. ಇದಕ್ಕೆ ಸ್ಪಂದಿಸಿದ ಉಸ್ತುವಾರಿ ಸಚಿವರು ಹೆಚ್ಚುವರಿ ಕಂಪ್ಯೂಟರ್ ಅಳವಡಿಕೆ, ಹಾಗೂ ಸಿಬ್ಬಂದಿಗಳ ನೇಮಕಕ್ಕೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

- Advertisement -

LEAVE A REPLY

Please enter your comment!
Please enter your name here

Most Popular

Recent Comments