Tuesday, June 6, 2023
Homeಕರಾವಳಿಸರಳ ರೀತಿಯ, ಮಾಲಿನ್ಯ ರಹಿತ ದೀಪಾವಳಿ ಹಬ್ಬ ಆಚರಣೆಗೆ ಜಿಲ್ಲಾಧಿಕಾರಿ ಆದೇಶ

ಸರಳ ರೀತಿಯ, ಮಾಲಿನ್ಯ ರಹಿತ ದೀಪಾವಳಿ ಹಬ್ಬ ಆಚರಣೆಗೆ ಜಿಲ್ಲಾಧಿಕಾರಿ ಆದೇಶ

- Advertisement -


Renault

Renault
Renault

- Advertisement -

ಮಂಗಳೂರು : ಕೋವಿಡ್-19 ಸೋಂಕು ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಪ್ರಸ್ತುತ ಸಾಲಿನ ದೀಪಾವಳಿ ಹಬ್ಬವನ್ನು ಸರಳ ರೀತಿಯಲ್ಲಿ ಮಾಲಿನ್ಯ ರಹಿತವಾಗಿ ಮತ್ತು ಸೂಕ್ತ ಮುಂಜಾಗೃತ ಕ್ರಮಗಳನ್ನು ಅನುಸರಿಸಿ ಆಚರಿಸಬೇಕಾಗಿರುತ್ತದೆ. ಆದುದರಿಂದ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಕಲಂ 26(1)(2)(3) ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷನಾಗಿ ಮತ್ತು ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧ್ಯಾದೇಶ 2020 ಕಲಂ 4 ರಲ್ಲಿ ಪ್ರದತ್ತವಾದ ಅಧಿಕಾರದಂತೆ ದ.ಕ. ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಈ ಕೆಳಗಿನ ಆದೇಶವನ್ನು ಹೊರಡಿಸಿರುತ್ತಾರೆ.

ನವೆಂಬರ್ 14 ರಿಂದ 17 ರವರೆಗೆ ದಕ್ಷಿಣ ಕನ್ನಡ ಜಿಲ್ಲಾಯಾದ್ಯಂತ ದೀಪಾವಳಿ ಹಬ್ಬವನ್ನು ಆಚರಿಸುವಾಗ ಈ ಕೆಳಕಂಡ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.

ಅಧಿಕೃತ ಪರವಾನಗಿಯನ್ನು ಪಡೆದ ಮಾರಾಟಗಾರರು ಮಾತ್ರ ಸಿಡಿಮದ್ದುಗಳನ್ನು ಮಾರಾಟ ಮಾಡಬೇಕು. ಪಟಾಕಿ ಮಾರಾಟದ ಮಳಿಗೆಗಳನ್ನು ನವೆಂಬರ್ 1 ರಿಂದ ನವೆಂಬರ್ 17 ರವರೆಗೆ ಮಾತ್ರ ತೆರೆದಿರಬೇಕು. ಪರವಾನಿಗೆದಾರರು ಪರವಾನಿಗೆಯಲ್ಲಿ ನಿಗದಿಪಡಿಸಿದ ದಿನಾಂಕ ಮತ್ತು ಸ್ಥಳದಲ್ಲಿ ಮಾತ್ರ ತಾತ್ಕಲಿಕ ಪಟಾಕಿ ಮಾರಾಟ ಅಂಗಡಿಗಳನ್ನು ತೆರೆಯಬೇಕು, ಬೇರೆ ದಿನ ಮತ್ತು ಸ್ಥಳದಲ್ಲಿ ತೆರೆಯಬಾರದು. ಸಾರ್ವಜನಿಕ ವಸತಿ ಸ್ಥಳಗಳಿಂದ ದೂರವಿರುವ ಮೈದಾನ ಅಥವಾ ಬಯಲು ಪ್ರದೇಶಗಳಲ್ಲಿ, ಪಟಾಕಿ ಮಳಿಗೆಗಳನ್ನು ಸ್ಥಾಪಿಸಲು ಸಂಬಂಧಪಟ್ಟ ಪರವಾನಿಗೆ ಪ್ರಾಧಿಕಾರಗಳು ಅನುಮತಿ ನೀಡತಕ್ಕದ್ದು. ಮಳಿಗೆಗಳಲ್ಲಿ ಎರಡು ಕಡೆಯಿಂದ ಸರಾಗವಾಗಿ ಗಾಳಿಯಾಡುವಂತಿರಬೇಕು, ಒಂದು ಮಾರಾಟ ಮಳಿಗೆಯಿಂದ ಮತ್ತೊಂದು ಮಳಿಗೆಗಳಿಗೆ ಕನಿಷ್ಠ 6 ಮೀಟರ್ ಅಂತರವಿರಬೇಕು. ಪರವಾನಗಿ ಪತ್ರವನ್ನು ಪಡೆದಂತವರು ಕಡ್ಡಾಯವಾಗಿ ಮಳಿಗೆಗಳಲ್ಲಿ ಹಾಜರಿರಬೇಕು, ಪರವಾನಗಿ ಪ್ರತಿಯನ್ನು ಸಾರ್ವಜನಿಕರಿಗೆ ಕಾಣುವಂತೆ ಪ್ರದರ್ಶಿಸಬೇಕು. ಪಟಾಕಿ ಸಿಡಿಮದ್ದುಗಳನ್ನು ಮಾರಾಟ ಮಾಡುವ ಮಳಿಗೆಗಳ ಸುತ್ತಮುತ್ತ ದಿನ ನಿತ್ಯ ಸ್ಯಾನಿಟೈಸೇಷನ್ ಮಾಡಬೇಕು. ಪಟಾಕಿ ಖರೀದಿಗೆ ಬರುವ ಸಾರ್ವಜನಿಕರಿಗೆ ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆಯನ್ನು ಕಲ್ಪಿಸಬೇಕು ಜೊತೆಗೆ ಸಾಮಾಜಿಕ ಅಂತರವನ್ನು ಪಾಲಿಸುವುದು ಹಾಗೂ ಅದನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಪಟಾಕಿ ಮಾರುವ ವ್ಯಾಪಾರಸ್ಥರು ಮತ್ತು ಖರೀದಿಗೆ ಬರುವ ವ್ಯಾಪರಸ್ಥರು ಕಡ್ಡಾಯವಾಗಿ ಮುಖಗವಸು ಧರಿಸಬೇಕು. ಅಲ್ಲದೇ ಯಾವುದೇ ರೀತಿಯ ಜನದಟ್ಟಣೆಯಾಗದಂತೆ ಕಟ್ಟುನಿಟ್ಟಾಗಿ ನೋಡಿಕೊಳ್ಳಬೇಕು.

ಪಟಾಕಿ ಖರೀದಿಯ ಉದ್ದೇಶಕ್ಕೆ 10 ವರ್ಷಕ್ಕಿಂತ ಕೆಳಗಿನ ಮಕ್ಕಳು, ಬಹು ಅಸ್ವಸ್ಥತೆ ಇರುವವರು, ವೃದ್ಧರು, ಗರ್ಭಿಣಿ ಸ್ತ್ರೀಯರು ದುರ್ಬಲ ವ್ಯಕ್ತಿಗಳು ತೆರಳದಂತೆ ಸಲಹೆ ನೀಡಲಾಗಿದೆ. ಕೋವಿಡ್-19 ಸಾಂಕ್ರಾಮಿಕ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರವು ಹೊರಡಿಸಿದ ಮಾರ್ಗಸೂಚಿಗಳನ್ನು ತಪ್ಪದೇ ಕಟ್ಟುನಿಟ್ಟಾಗಿ ಪಾಲಿಸಬೇಕು. ಅಲ್ಲದೇ, ಸಾರ್ವಜನಿಕರ ಆರೋಗ್ಯದ ದೃಷ್ಠಿಯಿಂದ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಮಹಾನಗರಪಾಲಿಕೆ, ಮಾಲಿನ್ಯ ನಿಯಂತ್ರಣ ಮಂಡಳಿ, ಅಗ್ನಿಶಾಮಕ ಇಲಾಖೆ, ಜಿಲ್ಲಾಡಳಿತ ಹಾಗೂ ಇತರ ಇಲಾಖೆ ಕಾರ್ಪೋರೇಷನ್ ಪ್ರಾಧಿಕಾರಗಳಿಂದ ಹೊರಡಿಸಲಾದ ಸೂಚನೆ ಹಾಗೂ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಮೇಲ್ಕಂಡ ನಿದೇರ್ಶನವನ್ನು ಪಾಲಿಸದೆ ವ್ಯತಿರಿಕ್ತವಾಗಿ ವರ್ತಿಸಿದ್ದಲ್ಲಿ ಅಂತವರ ವಿರುದ್ಧ ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧ್ಯಾದೇಶ 2020 ಕಲಂ 5(3), 6(1)(2) ರನ್ವಯ ಮತ್ತು ವಿಪತ್ತು ನಿರ್ವಹಣಾ ಕಾಯ್ದೆ 2005 ರ ಕಲಂ 57ರನ್ವಯ ಕಾನೂನು ರೀತ್ಯಾ ಕ್ರಮ ಜರಗಿಸಲಾಗುತ್ತದೆ.

- Advertisement -

LEAVE A REPLY

Please enter your comment!
Please enter your name here

Most Popular

Recent Comments