Sunday, May 28, 2023
Homeಕರಾವಳಿಹಿರಿಯ ಪತ್ರಕರ್ತ ಸೂರ್ಯನಾರಾಯಣ ಪೂವಳ ಇನ್ನಿಲ್ಲ

ಹಿರಿಯ ಪತ್ರಕರ್ತ ಸೂರ್ಯನಾರಾಯಣ ಪೂವಳ ಇನ್ನಿಲ್ಲ

- Advertisement -


Renault

Renault
Renault

- Advertisement -

ಬಂಟ್ವಾಳ: ಕಳೆದ ಇಪ್ಪತ್ತೈದು ವರ್ಷಗಳಿಗಿಂತಲೂ ಅಧಿಕ ಕಾಲ ಪತ್ರಕರ್ತರಾಗಿ ಬಂಟ್ವಾಳದಿಂದ ಕರ್ತವ್ಯ ಸಲ್ಲಿಸಿದ್ದ ಹಿರಿಯ ಪತ್ರಕರ್ತ ಕಲ್ಲಡ್ಕ ಸಮೀಪ ಅಮ್ಟೂರು ಪೂವಳ ನಿವಾಸಿ ಸೂರ್ಯನಾರಾಯಣ ರಾವ್ ಪೂವಳ (51) ಅಲ್ಪಕಾಲದ ಅಸೌಖ್ಯದ ಬಳಿಕ ಶುಕ್ರವಾರ ಬೆಳಗಿನ ಜಾವ ತನ್ನ ಮನೆಯಲ್ಲಿ ನಿಧನ ಹೊಂದಿದರು.

ತಾಯಿ, ಪತ್ನಿ ಸಹಿತ ಅಪಾರ ಬಂಧು, ಮಿತ್ರರನ್ನು ಅವರು ಅಗಲಿದ್ದಾರೆ. ಕಳೆದೆರಡು ತಿಂಗಳಿಂದ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ನಿನ್ನೆಯಷ್ಟೇ ಡಿಸ್ಚಾರ್ಜ್ ಆಗಿದ್ದರು. ಮುಂಗಾರು ಪತ್ರಿಕೆ ಸಹಿತ ಸ್ಥಳೀಯ ಪತ್ರಿಕೆಗಳಲ್ಲಿ ಕೆಲಸ ಮಾಡಿದ್ದ ಅವರು ಬಳಿಕ ಸುದೀರ್ಘ ಕಾಲ ಬಂಟ್ವಾಳದಿಂದ ಕನ್ನಡ ಜನಾಂತರಂಗ, ಕರಾವಳಿ ಅಲೆ ಪತ್ರಿಕೆಗಳ ವರದಿಗಾರರಾಗಿ ಕೆಲಸ ಮಾಡಿದ್ದರು.

ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಹಲವು ವರ್ಷಗಳ ಕಾಲ ದುಡಿದಿದ್ದ ಅವರ ನಿಧನಕ್ಕೆ ಸಂಘ ಸಂತಾಪ ಸೂಚಿಸಿದೆ.

- Advertisement -

LEAVE A REPLY

Please enter your comment!
Please enter your name here

Most Popular

Recent Comments