Tuesday, September 28, 2021
Homeರಾಜಕೀಯಕರ್ನಾಟಕದ ಪ್ರತಿ ಜಿಲ್ಲೆಗಳಲ್ಲಿ ಗೋಶಾಲೆ ಆರಂಭಿಸಲು 15 ಕೋಟಿ ರೂಪಾಯಿ ಬಿಡುಗಡೆಗೆ ಸಂಪುಟ ನಿರ್ಧಾರ

ಕರ್ನಾಟಕದ ಪ್ರತಿ ಜಿಲ್ಲೆಗಳಲ್ಲಿ ಗೋಶಾಲೆ ಆರಂಭಿಸಲು 15 ಕೋಟಿ ರೂಪಾಯಿ ಬಿಡುಗಡೆಗೆ ಸಂಪುಟ ನಿರ್ಧಾರ

- Advertisement -
Renault
- Advertisement -
Home Plus
- Advertisement -

ಬೆಂಗಳೂರು : ಕರ್ನಾಟಕದ ಪ್ರತಿ ಜಿಲ್ಲೆಯಲ್ಲಿ ಗೋಶಾಲೆಯನ್ನು ಆರಂಭಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿಯವರು, ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ಗೋ ಶಾಲೆ ಆರಂಭಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ ಮೊದಲ ಹಂತದಲ್ಲಿ 15 ಕೋಟಿ ಬಿಡುಗಡೆ ಮಾಡಲಾಗುವುದು. ಇನ್ನುಳಿದ ಹಣವನ್ನು ಅಗತ್ಯಕ್ಕೆ ತಕ್ಕಂತೆ ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಜಾನುವಾರು ಹತ್ಯೆ ನಿಷೇಧ ಮತ್ತು ಸಂರಕ್ಷಣಾ ಕಾಯ್ದೆ ಜಾರಿಗೊಳಿಸಲಾಗಿದೆ. ಕಾಯ್ದೆ ಮೂಲಕ ಗೋವುಗಳ ರಕ್ಷಣೆಗೆ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ಗೋ ಶಾಲೆಗಳನ್ನು ಆರಂಭಿಸಲು ತೀರ್ಮಾನಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

- Advertisement -

1 COMMENT

  1. Are we going to export beef and becoming Supreme power over beef exports?where are we going use those bulls… as tractors are been used to plough fields .. fields which are very few.. day by day we r growing in constructions. Sir instead of you shalas… please look on education and govt health centres. covid time v needed this.

LEAVE A REPLY

Please enter your comment!
Please enter your name here

- Advertisment -

Most Popular

Recent Comments