ಬೆಳ್ತಂಗಡಿ : ಜಮೀನು ವಿವಾದಕ್ಕ ಪರಿಶಿಷ್ಟ ಜಾತಿಯ ವ್ಯಕ್ತಿಯೊಬ್ಬರನ್ನು ಥಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಹಲ್ಲೆಗೊಳಗಾದ ವ್ಯಕ್ತಿ ಸಾವನಪ್ಪಿರುವ ಹಿನ್ನಲೆ ಇದೀಗ ಹಲ್ಲೆ ಮಾಡಿದ ವ್ಯಕ್ತಿಯ ಮೇಲೆ ಕೊಲೆ ಪ್ರಕರಣ ದಾಖಲಾಗಿದೆ.
ಕನ್ಯಾಡಿಯ ದಿನೇಶ್ (40) ಕೊಲೆಯಾದ ವ್ಯಕ್ತಿ.
ಧರ್ಮಸ್ಥಳ ನಿವಾಸಿ ಕಿಟ್ಟ ಯಾನೆ ಕೃಷ್ಣ ಡಿ. ಆರೋಪಿಯಾಗಿದ್ದು ತಲೆಮರೆಸಿಕೊಂಡಿದ್ದಾನೆ. ಬುಧವಾರ ಬೆಳಿಗ್ಗೆ 11 ಗಂಟೆಗೆ ಕನ್ಯಾಡಿಯ ದಿನೇಶ್ ಅವರ ಅಂಗಡಿ ಬಳಿ ಬಂದ ಕೃಷ್ಣ, ಜಾಗದ ದಾಖಲೆಗಳ ವಿಚಾರದಲ್ಲಿ ಜಗಳ ತೆಗೆದು, ಗಂಭೀರವಾಗಿ ಹಲ್ಲೆ ನಡೆಸಿದ್ದಾನೆ. ಅದೇ ದಿನ ರಾತ್ರಿ ದಿನೇಶ್ ತೀವ್ರ ಹೊಟ್ಟೆನೋವಿನಿಂದ ಬಳಲಿದ್ದರು.
ಮರುದಿನ ಆರೋಪಿ ಕೃಷ್ಣನ ಮನೆಗೆ ಬಂದ ದಿನೇಶ್ ಕುಟುಂಬದವರು ‘ನೀನೇ ಹಲ್ಲೆ ನಡೆಸಿದ್ದು, ಆಸ್ಪತ್ರೆಗೆ ಕರೆದುಕೊಂಡು ಹೋಗು’ ಎಂದು ಒತ್ತಾಯಿಸಿದ್ದರು. ಅದರಂತೆ ಫೆ. 24ರಂದು ದಿನೇಶ್ ಅವರನ್ನು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ ಕೃಷ್ಣ, ‘ಈತ ಕಾಲು ಜಾರಿ ಬಿದ್ದು ಗಾಯಗೊಂಡಿದ್ದಾನೆ’ ಎಂದು ವೈದ್ಯರ ಬಳಿ ಹೇಳಿದ್ದ. ಆದರೆ, ದಿನೇಶ್ ಅವರ ಪತ್ನಿ ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ ಕೃಷ್ಣನೇ ದಿನೇಶ್ ಮೇಲೆ ಹಲ್ಲೆ ಮಾಡಿರುವುದಾಗಿ ತಿಳಿಸಿದ್ದಾರೆ. ಗುರುವಾರ ಮಧ್ಯರಾತ್ರಿ ಚಿಕಿತ್ಸೆಗೆ ಸ್ಪಂದಿಸದೆ ದಿನೇಶ್ ಮೃತಪಟ್ಟಿದ್ದಾರೆ. ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಆರೋಪಿ ಕೃಷ್ಣ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಿ, ಸೋತಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ.
Somewhere else I read that it is quarrel within the family. Then why the question of ‘Parishishta jati’ .Pl clarify