Tuesday, September 28, 2021
Homeಕರಾವಳಿಪಾಣೆಮಂಗಳೂರು ಸೇತುವೆಯ ಬಳಿ ಯುವಕನೋರ್ವ ನದಿಗೆ ಹಾರಿ ಆತ್ಮಹತ್ಯೆಗೈದಿರುವ ಶಂಕೆ… ...

ಪಾಣೆಮಂಗಳೂರು ಸೇತುವೆಯ ಬಳಿ ಯುವಕನೋರ್ವ ನದಿಗೆ ಹಾರಿ ಆತ್ಮಹತ್ಯೆಗೈದಿರುವ ಶಂಕೆ… ಬೈಕ್ ಸ್ಟಾರ್ಟ್ ನಲ್ಲೇ ಇರಿಸಿ ಯುವಕ ನಾಪತ್ತೆ…

- Advertisement -
Renault
- Advertisement -
Home Plus
- Advertisement -

ಬಂಟ್ವಾಳ : ಪಾಣೆಮಂಗಳೂರು ಸೇತುವೆಯ ಬಳಿ ಬೆಂಗಳೂರು ಮೂಲದ ವ್ಯಕ್ತಿಯೋರ್ವ ಬೈಕನ್ನು ನಿಲ್ಲಿಸಿ ನಾಪತ್ತೆಯಾದ ಘಟನೆ ನಡೆದಿದ್ದು, ನದಿಗೆ ಹಾರಿರುವ ಅನುಮಾನ ವ್ಯಕ್ತವಾಗಿದೆ. ಬೆಂಗಳೂರು ದಾಸರಹಳ್ಳಿ ಮೂಲದ ಸತ್ಯವೇಲು(29) ನಾಪತ್ತೆಯಾದ ಯುವಕನಾಗಿದ್ದಾನೆ.

ಸತ್ಯವೇಲು ರವರ ಬೈಕ್ ನಿನ್ನೆ ಮುಂಜಾನೆ 4:30 ಸುಮಾರಿಗೆ ಪಾಣೆಮಂಗಳೂರು ಸೇತುವೆಯ ಮೇಲೆ ಮತ್ತೆ ಪ್ರತ್ಯಕ್ಷವಾಗಿದ್ದು, ಬೈಕ್ ಸ್ಟಾರ್ಟ್ ನಲ್ಲೇ ಇತ್ತು. ಬಳಿಕ ಯಾರೋ ಪೊಲೀಸರಿಗೆ ಮಾಹಿತಿ ನೀಡಿದ್ದು, ಬೈಕನ್ನು ಠಾಣೆಗೆ ತಂದಿದ್ದಾರೆ. ಜುಲೈ 17 ರಂದು ತಾಯಿಯಿಂದ ಪೆಟ್ರೋಲ್ ಹಾಕುವುದಕ್ಕೆ 200 ರೂಪಾಯಿ ಪಡೆದು ಕೆಲಸಕ್ಕೆಂದು ತೆರಳಿದ್ದನು. ಆದರೆ ಕೆಲಸಕ್ಕೆ ಹೋಗದೇ ಇದ್ದು, ರಾತ್ರಿ‌ 11 ಘಂಟೆಗೆ ತಾಯಿಗೆ ಕರೆ ಮಾಡಿ ಸ್ನೇಹಿತನ ಮನೆಯಲ್ಲಿರುವುದಾಗಿ‌ ತಿಳಿಸಿದ್ದಾನೆ.
ಮೊಬೈಲ್ ಆನ್ಲೈನ್ ಗೇಮ್ ಮೂಲಕ ಸಾಕಷ್ಟು ಹಣ ಕಳೆದುಕೊಂಡಿದ್ದು, ಹೀಗಾಗಿ ಆತ ಈ ರೀತಿ ವರ್ತಿಸುತ್ತಿದ್ದಾನೆ ಎಂದು ಪೋಷಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆತನ ನಾಪತ್ತೆಯ ಕುರಿತು ಬೆಂಗಳೂರಿನ ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಬಂಟ್ವಾಳ ನಗರ ಪೊಲೀಸರು ತಿಳಿಸಿದ್ದಾರೆ. ‌

ಅಚಾತುರ್ಯದ ವಿಷಯವೇನೆಂದರೆ ಈತ ಸುಮಾರು 15 ದಿನಗಳ ಹಿಂದೆ ಇದೇ ರೀತಿ ನದಿಗೆ ಹಾರುವುದಕ್ಕೆ ಬೆಂಗಳೂರಿನಿಂದ ಪಾಣೆಮಂಗಳೂರಿಗೆ ಆಗಮಿಸಿದ್ದನು. ಆದರೆ ಸ್ಥಳೀಯರು ಆತನನ್ನು ರಕ್ಷಿಸಿದ್ದು, ಬಳಿಕ ಬಂಟ್ವಾಳ ನಗರ ಪೊಲೀಸರು ಆತನ ಪೋಷಕರನ್ನು ಕರೆಸಿ ಕಳುಹಿಸಿಕೊಟ್ಟಿದ್ದರು.

- Advertisement -

LEAVE A REPLY

Please enter your comment!
Please enter your name here

- Advertisment -

Most Popular

Recent Comments