Saturday, June 3, 2023
HomeUncategorizedಮಸಿ ಮೀರಾ ರಾಘವೇಂದ್ರ?!

ಮಸಿ ಮೀರಾ ರಾಘವೇಂದ್ರ?!

- Advertisement -


Renault

Renault
Renault

- Advertisement -

ಬೆಂಗಳೂರು: ಹಿಂದು ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆನ್ನಲಾದ ಸಾಹಿತಿ ಭಗವಾನ್​ ಮುಖಕ್ಕೆ ವಕೀಲೆ ಮೀರಾ ರಾಘವೇಂದ್ರ ಅವರು ಮಸಿ ಬಳಿದ ಘಟನೆ ನಗರದ 2 ನೇ ಎಸಿಎಂಎಂ ನ್ಯಾಯಾಲಯದ ಆವರಣದಲ್ಲಿ ನಡೆದಿದೆ.

ಹಿಂದು ಧರ್ಮಕ್ಕೆ ಧಕ್ಕೆ ತಂದ ಹಿನ್ನೆಲೆಯಲ್ಲಿ ಮೀರಾ ರಾಘವೇಂದ್ರ ಖಾಸಗಿ ದೂರು ದಾಖಲಿಸಿದ್ದರು. ಪ್ರಕರಣ ಸಂಬಂಧ ಭಗವಾನ್​ರವರು ಇಂದು ಕೋರ್ಟ್​ಗೆ ಹಾಜರಾಗಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಇದಾದ ಬಳಿಕ ಭಗವಾನ್​ ಅವರು ಕೋರ್ಟ್​ನಿಂದ ಹೊರಗೆ ಬಂದಾಗ ಮೀರಾ ರಾಘವೇಂದ್ರ ಅವರು ಮುಖಕ್ಕೆ ಮಸಿ ಬಳಿದಿದ್ದಾರೆ.

ಹಿಂದೂ ಎಂಬ ಶಬ್ದ ಅವಮಾನಕರ
ಹಿಂದು ಧರ್ಮ ಧರ್ಮವೇ ಅಲ್ಲ. ಹಿಂದು ಎಂಬ ಶಬ್ದ ಅವಮಾನಕರ ಎಂದು ಪ್ರೊ. ಕೆ.ಎಸ್.ಭಗವಾನ್ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಹಿಂದು ಧರ್ಮ ಎಂದರೆ ಬ್ರಾಹ್ಮಣ ಎಂದರ್ಥ. ಗ್ರಾಮೀಣ ಜನರಿಗೆ ಹಿಂದು ಎಂದರೆ ಗೊತ್ತೇ ಇಲ್ಲ. ನೀವು ಯಾವ ಧರ್ಮ ಎಂದರೆ ಒಕ್ಕಲಿಗ, ಕುರುಬ ಅಂತ ಜಾತಿಗಳ ಹೆಸರನ್ನಷ್ಟೇ ಹೇಳುತ್ತಾರೆ. ಹಿಂದು‌ ಪದವನ್ನೇ ತೆಗೆದು ಹಾಕಬೇಕು. ನಿಮಗೆ ಮಾನ ಮರ್ಯಾದೆ ಇದ್ದರೆ ಆ ಪದ ತೆಗೆದು ಹಾಕಿ ಎಂದು ಭಗವಾನ್ ಹೇಳಿದ್ದರು.

- Advertisement -

LEAVE A REPLY

Please enter your comment!
Please enter your name here

Most Popular

Recent Comments