Tuesday, September 28, 2021
Homeಕರಾವಳಿಮಂಗಳೂರು ವಿಶ್ವವಿದ್ಯಾಲಯಕ್ಕೆ ಎ.ಬಿ.ವಿ.ಪಿ ಕಾರ್ಯಕರ್ತರಿಂದ ಮುತ್ತಿಗೆ ಹಾಕಲು ಯತ್ನ

ಮಂಗಳೂರು ವಿಶ್ವವಿದ್ಯಾಲಯಕ್ಕೆ ಎ.ಬಿ.ವಿ.ಪಿ ಕಾರ್ಯಕರ್ತರಿಂದ ಮುತ್ತಿಗೆ ಹಾಕಲು ಯತ್ನ

- Advertisement -
Renault
- Advertisement -
Home Plus
- Advertisement -

ಮಂಗಳೂರು : ಎಬಿವಿಪಿ ಕಾರ್ಯಕರ್ತರು ಐದನೇ ಸೆಮಿಸ್ಟರ್ ಪರೀಕ್ಷೆಯ ಫಲಿತಾಂಶ ವಿಳಂಬ ವಿರೋಧಿಸಿ ಕೊಣಾಜೆಯಲ್ಲಿರುವ‌ ಮಂಗಳೂರು ವಿಶ್ವವಿದ್ಯಾನಿಲಯದ ಎದುರು ಪ್ರತಿಭಟನೆ ನಡೆಸಿದರು. ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸಭೆ ಆರಂಭವಾಗುವ ವೇಳೆ ಮುತ್ತಿಗೆ ಹಾಕಲು ಯತ್ನಿಸಿದ ಎಬಿವಿಪಿ ಕಾರ್ಯಕರ್ತರನ್ನು ಪೊಲೀಸರು ತಡೆದರು.

ಈ ಸಂದರ್ಭದಲ್ಲಿ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ತಳ್ಳಾಟ ಸಹ ನಡೆಯಿತು. ಪ್ರತಿಭಟನಾ ನಿರತ ಕಾರ್ಯಕರ್ತರು ಫಲಿತಾಂಶ ಪ್ರಕಟಿಸಬೇಕೆಂಬ ತಮ್ಮ ಬೇಡಿಕೆ ಈಡೇರಿಸಬೇಕೆಂದು ಒತ್ತಾಯಿಸಿದರು. ಇದೇ ವೇಳೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಕುಲಪತಿ ಹಾಗೂ ಪರೀಕ್ಷಾಂಗ ಕುಲಸಚಿವರು ಎರಡು ದಿನಗಳಲ್ಲಿ ಫಲಿತಾಂಶ ಪ್ರಕಟಿಸುವ ಬಗ್ಗೆ ಅಧಿಕೃತ ಆದೇಶ ಪ್ರಕಟಿಸುತ್ತೇವೆ ಎಂದು ಭರವಸೆ ನೀಡಿದರು. ಆ ಬಳಿಕ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.

- Advertisement -

LEAVE A REPLY

Please enter your comment!
Please enter your name here

- Advertisment -

Most Popular

Recent Comments