ಬಂಟ್ವಾಳ : ತನ್ನ ಚಿಕ್ಕಪ್ಪನಿಂದಲೇ ನಿರಂತರವಾಗಿ ದೈಹಿಕ ಅತ್ಯಾಚಾರಗೊಳಗಾದ ಯುವತಿಯ ದೂರಿನಂತೆ ಅತ್ಯಾಚಾರ ಪ್ರಕರಣ ದಾಖಲಾದ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ನಡೆದಿದೆ.
ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಆಲಾಡಿ ನಿವಾಸಿ ಪುರುಷೋತ್ತಮ ಎಂಬಾತ ಆತನ ಪತ್ನಿಯ ಅಕ್ಕನ ಮಗಳ ಮೇಲೆಯೇ ನಿರಂತರವಾಗಿ ಬೆದರಿಕೆ ಹಾಕಿ ಬಲಾತ್ಕಾರ ಮಾಡಿ ಅತ್ಯಾಚಾರ ಮಾಡಿದ್ದಾನೆ ಎಂದು ಕಾಲೇಜು ವಿದ್ಯಾರ್ಥಿನಿ ದೂರು ನೀಡಿದ್ದಾಳೆ. ಮನೆಯವರಿಗೆ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಲ್ಲದೆ ಮನೆಯವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಬೆದರಿಕೆ ಹಾಕುತ್ತಿದ್ದ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಕಳೆದ ಒಂದು ವರ್ಷದಿಂದ ಯುವತಿ ಬಿ.ಸಿ.ರೋಡ್ ನ ಸಂಬಂಧಿಕರ ಮನೆಯಿಂದ ಕಾಲೇಜು ಹೋಗುತ್ತಿದ್ದಳು. ಅಲ್ಲೇ ಆರೋಪಿ ಪುರುಷೋತ್ತಮ ಕೂಡ ವಾಸವಾಗಿದ್ದನು. ಅಗಿನಿಂದಲೇ ಆರೋಪಿ ವಿದ್ಯಾರ್ಥಿನಿಗೆ ಬೆದರಿಕೆ ಹಾಕಿ ಅವಳ ಮೇಲೆ ನಿರಂತರವಾಗಿ ಅತ್ಯಾಚಾರ ಮಾಡುತ್ತಲೇ ಬಂದಿದ್ದು ಪ್ರಸ್ತುತ ಈತನ ಕಿರುಕುಳ ತಡೆಯಲಾಗದೆ ಮನೆಯವರಿಗೆ ತಿಳಿಸಿ ಠಾಣೆಗೆ ದೂರು ನೀಡಿದ್ದಾಳೆ.
Guruthu bahiranga madabedi anna