ಬೆಂಗಳೂರು : ಕಳೆದ 7 ವರ್ಷಗಳ ಹಿಂದೆ ಕಾರ್ಪೋರೇಷನ್ ಬ್ಯಾಂಕ್ ಎಟಿಯಂನಲ್ಲಿ ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ಪ್ರಕರಣದ ಕುರಿತು ಇಂದು ಸಿಸಿಎಚ್ 65 ಕೋರ್ಟ್ ಆದೇಶ ಹೊರಡಿಸಲಿದ್ದು, ಶಿಕ್ಷೆ ಪ್ರಕಟವಾಗಲಿದೆ.
ಬೆಂಗಳೂರಿನ ಕಾರ್ಪೋರೇಷನ್ ಸರ್ಕಲ್ ನಲ್ಲಿರುವ ಕಾರ್ಪೋರೇಷನ್ ಬ್ಯಾಂಕ್ ಎಟಿಎಂಗೆ ಹಣ ಡ್ರಾ ಮಾಡಲು ತೆರಳಿದ್ದ ವೇಳೆಯಲ್ಲಿ ಜ್ಯೋತಿ ಉದಯ್ ಎಂಬವರ ಮೇಲೆ ಮಧುಕರ್ ರೆಡ್ಡಿ ಎಂಬಾತ ಮಾರಣಾಂತಿಕವಾಗಿ ಹಲ್ಲೆ ನಡೆಸಿ ನಾಪತ್ತೆಯಾಗಿದ್ದ. ಈ ಕುರಿತು ಎಸ್.ಜೆ. ಪಾರ್ಕ್ ಪೊಲೀಸ್ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು
ಎಟಿಎಂ ಕಳವಿನ ವೇಳೆಯಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ಸತತ 4 ವರ್ಷಗಳ ಕಾಲ 2017ರಲ್ಲಿ ಆರೋಪಿಯ ವಿರುದ್ದ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದರು. ಇದೀಗ ನ್ಯಾಯಾಲಯ ಆರೋಪಿಗೆ ಶಿಕ್ಷೆ ಪ್ರಕಟಿಸುತ್ತಿರುವುದು ಕುತೂಹಲವನ್ನು ಮೂಡಿಸಿದೆ.