Saturday, September 30, 2023
Homeಕರಾವಳಿಪತ್ರಕರ್ತರಿಗೆ ಆಯುಷ್ಮಾನ್ ಭಾರತ್ - ಆರೋಗ್ಯ ಕರ್ನಾಟಕ ಕಾರ್ಡ್‌ಗೆ ನೋಂದಣಿ ಶಿಬಿರಕ್ಕೆ ಚಾಲನೆ

ಪತ್ರಕರ್ತರಿಗೆ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಕಾರ್ಡ್‌ಗೆ ನೋಂದಣಿ ಶಿಬಿರಕ್ಕೆ ಚಾಲನೆ

- Advertisement -Renault

Renault
Renault

- Advertisement -

ಪತ್ರಕರ್ತರಿಗೆ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಕಾರ್ಡ್‌ಗೆ ನೋಂದಣಿ ಶಿಬಿರಕ್ಕೆ ಚಾಲನೆ

ಮಂಗಳೂರು: ಆರೋಗ್ಯ ಸುರಕ್ಷತೆಯ ದೃಷ್ಟಿಯಿಂದ ಸರಕಾರದ ಪ್ರಮುಖ ಯೋಜನೆಯಾದ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡ್ ಸೌಲಭ್ಯವನ್ನು ಸಮಾಜದ ಎಲ್ಲಾ ಜನರಿಗೆ ಒದಗಿಸಬೇಕು ಮತ್ತು ಈ ಮಾಹಿತಿ ಎಲ್ಲರಿಗೂ ತಲುಪಬೇಕಾಗಿದೆ ಎಂದು ದ.ಕ ರೆಡ್ ಕ್ರಾಸ್ ಚೆಯರ್ ಮನ್ ಡಾ.ಶಾಂತಾರಾಮ ಶೆಟ್ಟಿ ತಿಳಿಸಿದ್ದಾರೆ. ಫೆ.22ರಿಂದ 24ರವರೆಗೆ ಮಂಗಳೂರು ಪತ್ರಿಕಾಭವನದಲ್ಲಿ ಹಮ್ಮಿಕೊಂಡ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಕಾರ್ಡ್ ‌ಗೆ ನೋಂದಣಿ ಶಿಬಿರವ ನ್ನು ಉದ್ಘಾಟಿಸಿ ಅವರು ಮಾತನಾಡಿದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ , ಜಿಲ್ಲಾ .ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ದ.ಕ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ , ಪ್ರಧಾನ ಕಾರ್ಯದರ್ಶಿ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ಕೋಶಾಧಿಕಾರಿ ಬಿ..ಎನ್.ಪುಷ್ಪರಾಜ್, ವಾರ್ತಾ ಇಲಾಖೆಯ ದೀಪಾ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

- Advertisement -

LEAVE A REPLY

Please enter your comment!
Please enter your name here

Most Popular

Recent Comments