Sunday, May 28, 2023
Homeಕರಾವಳಿಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ 'ವಿಶ್ವ ಸ್ಥಳೀಯ ಭಾಷಾ ದಿನಾಚರಣೆ

ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ‘ವಿಶ್ವ ಸ್ಥಳೀಯ ಭಾಷಾ ದಿನಾಚರಣೆ

- Advertisement -


Renault

Renault
Renault

- Advertisement -

ಮಂಗಳೂರು:
ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ವತಿಯಿಂದ ಹಾಗೂ ಮಂಗಳೂರು ವಿವಿ ಬ್ಯಾರಿ ಅಧ್ಯಯನ ಪೀಠದ ಜಂಟಿ ಆಶ್ರಯದಲ್ಲಿ ಮಂಗಳೂರಿನ ವಿವಿ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ರವಿವಾರ ವಿಶ್ವ ಸ್ಥಳೀಯ ಭಾಷಾ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷ ಡಾ. ಗಿರೀಶ್ ಭಟ್ ಅಜಕ್ಕಳ ಗಿಡಕ್ಕೆ ನೀರುಣಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಇದೇ ವೇಳೆ ಮಾತನಾಡಿದ ಅವರು, ಭಾಷೆ ಒಂದು ಸಂಸ್ಕೃತಿಯ ವಾಹಕ.‌ ಭಾಷಾ ಶಿಕ್ಷಣಕ್ಕೆ ಹೆಚ್ಚು ಮಹತ್ವ ಕೊಡಬೇಕಿದೆ. ಅಸ್ತಿತ್ವದ ವಿಚಾರದಲ್ಲಿ ಸ್ಥಳೀಯ ಭಾಷೆ ಬಗ್ಗೆ ಎಚ್ಚರ ವಹಿಸಬೇಕಿದೆ ಎಂದರು. ಇನ್ನು ಅಧ್ಯಕ್ಷತೆ ವಹಿಸಿದ್ದ ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ರಹೀಂ ಉಚ್ಚಿಲ್ ಮಾತನಾಡಿ, ಸ್ಥಳೀಯ ಭಾಷೆಗಳಿಗೆ ತಮ್ಮದೇ ಆದ ಇತಿಹಾಸ ಇದೆ. ಸ್ಥಳೀಯ ಭಾಷೆಗಳಲ್ಲಿ ಗಣ್ಯರಿಂದ ವಿಚಾರ ಮಂಡಿಸುವ ಮೂಲಕ ನಾವು ವಿಶೇಷವಾಗಿ ಭಾಷಾ ದಿನಾಚರಣೆ ಆಚರಿಸುತ್ತಿದ್ದೇವೆ ಅಂದರು.

ವೇದಿಕೆಯಲ್ಲಿ ಬ್ಯಾರಿ ಅಕಾಡೆಮಿ ರಿಜಿಸ್ಟ್ರಾರ್ ಪೂರ್ಣಿಮಾ, ಮಂಗಳೂರು ವಿವಿ ಕಾಲೇಜಿನ ಪ್ರಾಂಶುಪಾಲ ಡಾ. ಹರೀಶ್ ಎ ಹಾಗೂ ಮಂಗಳೂರು ವಿವಿ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜಕಿ ಡಾ. ನಾಗರತ್ನ,
ಉಪನ್ಯಾಸಕ ಹೈದರಾಲಿ ಕೆಎ ಅತಿಥಿಗಳಾಗಿ ಭಾಗವಹಿಸಿದ್ದರು. ಇದೇ ವೇಳೆ ಮಂಗಳೂರಿನ ಸಂಗೀತ ಮತ್ತು ಸಾಂಸ್ಕೃತಿಕ ಕಲಾವಿದರಾದ ಪುಷ್ಕಳ ಕುಮಾರ್ (ಕನ್ನಡ), ಮಂಗಳೂರು ವಿವಿ ಸಂಧ್ಯಾ ಕಾಲೇಜಿನ ಸ್ನಾತಕೋತ್ತರ ತುಳು ವಿಭಾಗದ ನಿವೃತ್ತ ಪ್ರಾಂಶುಪಾಲ ಡಾ. ಸುಭಾಶ್ಚಂದ್ರ ಕಣ್ವತೀರ್ಥ (ತುಳು), ಮಂಗಳೂರು ವಿವಿ ಸಂಧ್ಯಾ ಕಾಲೇಜಿನ ಸ್ನಾತಕೋತ್ತರ ಕೊಂಕಣಿ ವಿಭಾಗದ ಸಂಯೋಜಕ ಡಾ. ದೇವದಾಸ್ ಪೈ (ಕೊಂಕಣಿ), ಸಾಹಿತಿ ಅಬ್ದುರ್ರಹ್ಮಾನ್ ಕುತ್ತೆತ್ತೂರು (ಬ್ಯಾರಿ), ಮಂಗಳೂರು ವಿವಿ ಕೊಡವ ಸಾಂಸ್ಕೃತಿಕ ಅಧ್ಯಯನ ಪೀಠದ ಸಂಯೋಜಕಿ ಡಾ. ಮೀನಾಕ್ಷಿ ಎಂ.ಎಂ. (ಕೊಡವ), ಮಂಗಳೂರು ಸಂತ ಅಲೋಶಿಯಸ್ ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ವಿಶ್ವನಾಥ ಬದಿಕಾನ (ಅರೆಭಾಷೆ), ಮಂಗಳೂರು ವಿವಿ ಸಂಧ್ಯಾ ಕಾಲೇಜಿನ ಸ್ನಾತಕೋತ್ತರ ತುಳು ವಿಭಾಗದ ಅತಿಥಿ ಉಪನ್ಯಾಸಕ ಶ್ಯಾಮ್ ಪ್ರಸಾದ್ (ಹವ್ಯಕ), ನಿವೃತ್ತ ಶಿಕ್ಷಕಿ ಸುಮಿತ್ರಾ ಜಿ. ಅಚಾರ್ಯ (ಶಿವಳ್ಳಿ), ಬಿ ಮೂಡ ಸರಕಾರಿ ಪಪೂ ಕಾಲೇಜಿನ ಉಪನ್ಯಾಸಕ ಅಬ್ದುಲ್ ರಝಾಕ್ ಅನಂತಾಡಿ (ಮಲಾಮೆ), ಮಂಗಳೂರು ವಿವಿ ವಾಣಿಜ್ಯ ವಿಭಾಗದ ಸಂಶೋಧನಾ ವಿದ್ಯಾರ್ಥಿ ದಿನಕರ ಕೆಂಜೂರು (ಕೊರಗ), ಕಿನ್ಯದ ಶ್ರೀ ಶಾರದಾ ವಿದ್ಯಾನಿಕೇತನ ಪದವಿ ಕಾಲೇಜಿನ ಉಪನ್ಯಾಸಕ ಅರುಣ್ ಉಳ್ಳಾಲ್ (ತೀಯಾ), ಸೋಮೇಶ್ವರ ಉಚ್ಚಿಲದ ಸರಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿ ಚಂಚಲಾಕ್ಷಿ (ಮೋಯಾ), ಪಿ.ಎ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಮುಹಮ್ಮದ್ ಅವ್ವಾದ್ (ನವಾಯತಿ), ಯಕ್ಷಗಾನ ಕಲಾವಿದ ಗಿರೀಶ್ ಐತಾಳ್ ಕರಂಬಳ್ಳಿ (ಕುಂದಾಪುರ ಕನ್ನಡ), ಮಂಗಳೂರು ವಿವಿ ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಪ್ರೀತಿ ಕೀರ್ತಿ ಡಿಸೋಜ (ಕ್ರಿಶ್ಚಿಯನ್ ಕೊಂಕಣಿ), ಪಿ.ಎ ಕಾಲೇಜಿನ ಎಂಬಿಎ ವಿಭಾಗದ ನಿರ್ದೇಶಕ ಡಾ. ಸೈಯದ್ ಅಮೀನ್ (ಉರ್ದು) ಸಂಪನ್ಮೂಲ ವ್ಯಕ್ತಿಗಳಾಗಿ ವಿಚಾರ ಮಂಡಿಸಿದರು.


ಇದೇ ವೇಳೆ ಕರ್ನಾಟಕ‌ ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯರಾದ ಶಂಶೀರ್ ಬುಡೋಳಿ, ಚಂಚಲಾಕ್ಷಿ ಉಪಸ್ಥಿತರಿದ್ದರು. ಬ್ಯಾರಿ ಅಧ್ಯಯನ ಪೀಠದ ಸಂಯೋಜಕ ಡಾ. ಅಬೂಬಕ್ಕರ್ ಸಿದ್ದೀಕ್ ಪ್ರಸ್ತವನೆಗೈದರು. ಬ್ಯಾರಿ ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ಪೂರ್ಣಿಮಾ ಸ್ವಾಗತಿಸಿದರು. ವೆಂಕಟೇಶ್ ನಾಯಕ್, ಕಾವ್ಯ ಹೆಗ್ಡೆ ಕಾರ್ಯಕ್ರಮ ನಿರೂಪಣೆ ಮಾಡಿದರು. ಅಕಾಡೆಮಿ ಸದಸ್ಯೆ ಸುರೇಖಾ ಧನ್ಯವಾದಗೈದರು.

- Advertisement -

LEAVE A REPLY

Please enter your comment!
Please enter your name here

Most Popular

Recent Comments