ಬಂಟ್ವಾಳ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಅಭಿನಂದನಾ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಾಣ ಮಾಡಿದ ಹರೀಶ್ ಪೂಂಜಾ ಮತ್ತು ಈಶ್ವರಪ್ಪ ಅವರ ಮೇಲೆ ಬಂಟ್ವಾಳ ನಗರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನೆಲೆ ಈ ಇಬ್ಬರು ಬಿಜೆಪಿಗರ ಮೇಲೆ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಬಂಟ್ಟಾಳ ನಗರ ಠಾಣಾಧಿಕಾರಿಗಳಿಗೆ ಭಾಷಣದ ವೀಡಿಯೊ ಸಿ. ಡಿ. ಲಗತ್ತಿಸಲ್ಪಟ್ಟ ದಾಖಲೆಗಳೊಂದಿಗೆ ಎಸ್.ಡಿ.ಪಿ.ಐ ಬಂಟ್ಟಾಳ ಕ್ಷೇತ್ರ ಸಮಿತಿ ಸದಸ್ಯರಾದ ಮೂನೀಶ್ ಆಲಿ ದೂರು ದಾಖಲಿಸಿದ್ದಾರೆ.
ಈ ಸಂದರ್ಭದಲ್ಲಿ ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಹುಲ್ ಎಸ್.ಎಚ್, ಕ್ಷೇತ್ರ ಅಧ್ಯಕ್ಷರಾದ ಯೂಸುಫ್ ಆಲಡ್ಕ, ಕ್ಷೇತ್ರ ಜೊತೆ ಕಾರ್ಯದರ್ಶಿ ಸಲೀಂ ಆಲಾಡಿ ಮತ್ತು ಮಲಿಕ್ ಕೊಲಕೆ ಉಪಸ್ಥಿತರಿದ್ದರು.