ಮಂಗಳೂರು:ನಗರದ ಗೂಡ್‌ಶೆಡ್ ಎದುರು ಆಟೋ ರಿಕ್ಷಾದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬುಧವಾರ ಬಂಧಿಸಿದ್ದಾರೆ.
ಸ್ಥಳೀಯ ನಿವಾಸಿ ಶೇಖ್ ಅಬೂಬಕರ್ ಮುಸಾವಿರ್ ಬಂಧಿತ ಆರೋಪಿ.
ಸಿಸಿಬಿ ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿ ಮೇರೆಗೆ ಗೂಡ್‌ಶೆಡ್ ಬಳಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ. ಉಳ್ಳಾಲದ ಮುಕ್ಕಚ್ಚೇರಿಯ ಉಬೈದುಲ್ಲಾ ಎಂಬಾತನಿಂದ ಖರೀದಿಸಿ ಮಾರಾಟ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಯಿಂದ 7 ಸಾವಿರ ರೂ. ವೌಲ್ಯದ 365 ಗ್ರಾಂ ಗಾಂಜಾ, 1.50 ಲಕ್ಷ ರೂ. ವೌಲ್ಯದ ರಿಕ್ಷಾ ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಕ್ಕೆ ಪಡೆದ ಒಟ್ಟು ಸೊತ್ತಿನ ವೌಲ್ಯ 1.57 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.
ಈ ಕುರಿತು ಮಂಗಳೂರು ದಕ್ಷಿಣ (ಪಾಂಡೇಶ್ವರ) ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಆಟೋ ರಿಕ್ಷಾದಲ್ಲಿ ಗಾಂಜಾ ಮಾರುತ್ತಿದ್ದವ ಸಿಸಿಬಿ ಬಲೆಗೆ…!!!
- Advertisement -
Recent Comments
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಮಾಡಿ ಕೇಂದ್ರ ಸರ್ಕಾರ ಖಜಾನೆ ತುಂಬಿಸಿಕೊಳ್ಳುತ್ತಿದೆ : ಮಾಜಿ ಸಚಿವ ಯು.ಟಿ ಖಾದರ್
on
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಮಾಡಿ ಕೇಂದ್ರ ಸರ್ಕಾರ ಖಜಾನೆ ತುಂಬಿಸಿಕೊಳ್ಳುತ್ತಿದೆ : ಮಾಜಿ ಸಚಿವ ಯು.ಟಿ ಖಾದರ್
on
ಮಂಗಳೂರಿನಲ್ಲೊಬ್ಬ ಸೋನು ಸೂದ್ : ಪನಾಮ ಕಾರ್ಪೋರೇಷನ್ ಲಿಮಿಟೆಡ್ ನ ಚೇರ್ಮನ್ ಮತ್ತು ಸಿ. ಇ. ಒ ವಿವೇಕ್ ರಾಜ್ ಪೂಜಾರಿ
on
ದೇಶವಿದೇಶಗಳಲ್ಲಿ ವೈರಲ್ ಆಗುತ್ತಿದೆ ಈ ವೀಡಿಯೋ : ಅಂಬಾನಿ ತನ್ನ ಘನತೆಗಾಗಿ ದೇಶದ ಘನತೆಯನ್ನು ಕುಗ್ಗಿಸುತ್ತಿದ್ದಾರೋ…!
on