Tuesday, September 28, 2021
Homeಕರಾವಳಿಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಮುಖ್ಯಮಂತ್ರಿ…. ಮಾಸ್ಕ್ ಇಲ್ಲದೆ ಏನು ಆಡಳಿತ ಮಾಡ್ತೀರಾ ನೀವು…? ...

ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಮುಖ್ಯಮಂತ್ರಿ…. ಮಾಸ್ಕ್ ಇಲ್ಲದೆ ಏನು ಆಡಳಿತ ಮಾಡ್ತೀರಾ ನೀವು…? ದಕ್ಷಿಣ ಕನ್ನಡದಲ್ಲಿ ‌ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ತರಾಟೆಗೆ…

- Advertisement -
Renault
- Advertisement -
Home Plus
- Advertisement -

ಮಂಗಳೂರು : ಕೊರೋನದ ಕುರಿತಂತೆ ನಗರದ ಜಿಲ್ಲಾ ಪಂಚಾಯತ್ ನಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆ ನಡೆಸಿದ ವೇಳೆ ಮಾಸ್ಕ್ ಹಾಗೂ ಗ್ಲೌಸ್ ನ ಕೊರತೆಯಾಗಿರುವ ವಿಚಾರವನ್ನು ಪ್ರಸ್ತಾಪಿಸಿದ ವೇಳೆ ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಸಭೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಶಾ ಕಾರ್ಯಕರ್ತರು ಸೇರಿದಂತೆ ಅರೋಗ್ಯ ಕಾರ್ಯಕರ್ತರಿಗೆ ಪಿಪಿಇ ಕಿಟ್, ಮಾಸ್ಕ್ ಹಾಗೂ ಗ್ಲೌಸ್ ಕೊರತೆ ಇದೆ ಎಂದು ಶಾಸಕ ಯು.ಟಿ. ಖಾದರ್ ಆಕ್ಷೇಪಿಸಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕಿಶೋರ್ ಕುಮಾರ್, ಪಿಪಿಇ ಕಿಟ್ ಸಾಕಷ್ಟು ಲಭ್ಯ ಇದೆ. ಗ್ಲೌಸ್ ಮತ್ತು ಎನ್95 ಮಾಸ್ಕ್ ಕೊರತೆ ಇದ್ದು ಪೂರೈಕೆಗೆ ಕ್ರಮ ವಹಿಸಲಾಗಿದೆ ಎಂದರು.

ಕೂಡಲೇ ಅಸಮಾಧಾನಗೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ದ.ಕ. ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಹಾಗೂ ಆರೋಗ್ಯಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು.
N-95 ಮಾಸ್ಕ್ ಇಲ್ಲದೆ ಹೇಗೆ ಆಡಳಿತ ನಡೆಸುತ್ತೀರಾ? ನಿಮಗೆ ಅಷ್ಟೂ ಕಾಮನ್ ಸೆನ್ಸ್ ಇಲ್ವೇ ? ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತರಾಟೆಗೆ ತೆಗೆದುಕೊಂಡಿದ್ದಾರೆ. ಮಾಸ್ಕ್, ಗ್ಲೌಸ್ ಇಲ್ಲದೆ ನೀವು ಹೇಗೆ ಆಡಳಿತ ನಡೆಸುತ್ತೀರಾ, ನಿಮ್ಮಲ್ಲಿ ಎಸ್.ಡಿ.ಆರ್.ಎಫ್ ಫಂಡ್ ಇದೆಯಲ್ಲವೇ ಅದನ್ನು ಬಳಸಿ ಕೂಡಲೇ ಖರೀದಿಸಿ ಎಂದು ತಾಕೀತು ಮಾಡಿದರು. ಅಗತ್ಯ ವಸ್ತುಗಳನ್ನು ದಾಸ್ತಾನು ಇಟ್ಟುಕೊಳ್ಳದೆ ನೌಕರರು ಕೆಲಸ ಮಾಡುವುದಾದರೂ ಹೇಗೆ, ನಿಮಗೆ ಎಲ್ಲಾ ಅಧಿಕಾರಗಳನ್ನು ಕೊಟ್ಟರೂ ಸಾಮಾನ್ಯ ಕೆಲಸ ಮಾಡಲು ನಿಮ್ಮಿಂದ ಆಗುವುದಿಲ್ಲ, ಕೂಡಲೇ ಮಾಸ್ಕ್ ಖರೀದಿಸಿ ಎಂದು ಮುಖ್ಯಮಂತ್ರಿ ಹೇಳಿದರು.

ನಂತರ ಜಿಲ್ಲಾ ಅರೋಗ್ಯ ಅಧಿಕಾರಿಯನ್ನು ಕೂಡಾ ತರಾಟೆಗೆ ತೆಗೆದುಕೊಂಡ ಮುಖ್ಯಮಂತ್ರಿಯವರು, ನೀನೇನು ನಿದ್ದೆ ಮಾಡ್ತಾ ಇದ್ದೀಯಾ ?, ಮಾಸ್ಕ್ ಕಡಿಮೆ ಇರುವ ವಿಚಾರವನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ಯಾಕೆ ತರಲಿಲ್ಲ, ನಿಮಗೆ ಕೆಲಸ ಮಾಡುವ ಮನಸ್ಸು ಇಲ್ಲವೇ ಎಂದು ಮುಖ್ಯಮಂತ್ರಿ ತರಾಟೆಗೆ ತೆಗೆದುಕೊಂಡರು.

- Advertisement -

LEAVE A REPLY

Please enter your comment!
Please enter your name here

- Advertisment -

Most Popular

Recent Comments