Tuesday, September 28, 2021
Homeರಾಜಕೀಯಸಿಎಂ ನಾಪತ್ತೆಯಾಗಿದ್ದಾರೆ: ಯತ್ನಾಳ್ ಹೇಳಿಕೆ

ಸಿಎಂ ನಾಪತ್ತೆಯಾಗಿದ್ದಾರೆ: ಯತ್ನಾಳ್ ಹೇಳಿಕೆ

- Advertisement -
Renault
- Advertisement -
Home Plus
- Advertisement -

ಬೆಂಗಳೂರು: ಈಗಾಗಲೇ ಸಿಎಂ ಯಡಿಯೂರಪ್ಪ ವಿರುದ್ಧ ಹಲವು ಆರೋಪಗಳನ್ನು ಮಾಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ವಿಧಾನಸಭೆಯಲ್ಲಿ ಮತ್ತೆ ಯಡಿಯೂರಪ್ಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ‘ಉತ್ತರ ಕೊಡಬೇಕಾದ ಸಿಎಂ ನಾಪತ್ತೆಯಾಗಿದ್ದಾರೆ’ ಎಂದು ಗರಂ ಆಗಿದ್ದಾರೆ.

‘ಹಲವು ಸಮುದಾಯಗಳಿಗೆ ಮೀಸಲಾತಿ ಸಿಗಬೇಕಿದ್ದು, ಸಣ್ಣ ಸಮುದಾಯಗಳಿಗೆ ಅನ್ಯಾಯವಾಗುತ್ತಿದೆ. ಸಿಎಂ ಯಡಿಯೂರಪ್ಪ ನಿನ್ನೆ ಮಾತನಾಡುತ್ತೇನೆ ಎಂದು ಹೇಳಿದ್ದರು. ಆದರೆ, ಉತ್ತರ ಕೊಡಬೇಕಾದ ಸಿಎಂ ಯಡಿಯೂರಪ್ಪ ನಾಪತ್ತೆಯಾಗಿದ್ದಾರೆ’ ಎಂದು ಶಾಸಕ ಯತ್ನಾಳ್ ಹೇಳಿದ್ದಾರೆ.

ಈ ವೇಳೆ ಮಧ್ಯಪ್ರವೇಶಿಸಿದ ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ ಪಿ ರೇಣುಕಾಚಾರ್ಯ ಅವರು ಶಾಸಕ ಯತ್ನಾಳ್ ಜೊತೆ ಜಟಾಪಟಿ ನಡೆಸಿದರು.

- Advertisement -

LEAVE A REPLY

Please enter your comment!
Please enter your name here

- Advertisment -

Most Popular

Recent Comments