ಬೆಂಗಳೂರು ಜನವರಿ 26: ಸಂವಿಧಾನದ ಮೂಲ ಆಶಯಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿಯನ್ನು ಮೂಡಿಸುವ ಉದ್ದೇಶದಿಂದ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ವತಿಯಿಂದ ಇಂದು ವಿಧಾನಸೌಧದ ಎದುರು ಸಂವಿಧಾನಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ವೇಷಧಾರಿಯಾಗಿ ಸಂವಿಧಾನದ ಪೀಠಿಕೆಯ ಪ್ರತಿ ಹಾಗೂ ಮಾಸ್ಕ್ ಮತ್ತು ಸ್ಯಾನಿಟೈಸರ್ ವಿತರಿಸಿ ಗಣರಾಜ್ಯೋತ್ಸವವನ್ನು ವಿಶೇಷವಾಗಿ ಆಚರಿಸಲಾಯಿತು.
ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷರಾದ ಡಾ.ಸಿ.ಎಸ್ ರಘು ಅವರ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಈ ಕಾರ್ಯಕ್ರಮದಲ್ಲಿ ಪೊಲೀಸರು ಹಾಗೂ ಸಾರ್ವಜನಿಕರಿಗೆ ವಿತರಣೆಯನ್ನು ಮಾಡಲಾಯಿತು. ನಂತರ ಮಾತನಾಡಿದ ಅವರು ಸಂವಿಧಾನದ ಮೂಲ ಆಶಯಗಳನ್ನು ನಾವು ಮರೆಯುತ್ತಿದ್ದೇವೆ ಎನ್ನಿಸುತ್ತಿದೆ. ಈ ನಿಟ್ಟಿನಲ್ಲಿ ಜನರಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಸಂವಿಧಾನದ ಪ್ರತಿಗಳನ್ನು ನೀಡುವ ಉದ್ದೇಶದಿಂದ ನಾವು ಸಂವಿಧಾನದ ಪೀಠಿಕೆಯ ಪ್ರತಿಗಳು ಹಾಗೂ ಸ್ಯಾನಿಟೈಸರ್ ಮತ್ತು ಮಾಸ್ಕ್‌ಗಳನ್ನು ವಿತರಿಸಿದ್ದೇವೆ.
ಸಂವಿಧಾನ ಸಂರಕ್ಷಿಸಿ ಪ್ರಜಾಪ್ರಭುತ್ವ ಉಳಿಸಿ ಎನ್ನುವ ಜನಜಾಗೃತಿಯ ಅಭಿಯಾನವನ್ನು ಹಮ್ಮಿಕೊಂಡಿದ್ದೇವೆ ಎಂದು ಹೇಳಿದರು.
ಗಣರಾಜ್ಯೋತ್ಸವವನ್ನು ವಿಶೇಷವಾಗಿ ಆಚರಿಸುವ ಉದ್ದೇಶದಿಂದ ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷರಾದ ಡಾ.ಸಿ.ಎಸ್ ರಘು ಅವರು, ಇಂದು ವಿಧಾನಸೌಧಧ ಎದುರು ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ವೇಷಧಾರಿಯಾಗಿ ಸಾರ್ವಜನಿಕರಿಗೆ ಸಂವಿಧಾನದ ಪೀಠಿಕೆ ಪ್ರತಿಗಳನ್ನು ಹಾಗೂ ಉಚಿತ ಮಾಸ್ಕ್ ಮತ್ತು ಸ್ಯಾನಿಟೈಸರ್‌ಗಳನ್ನು ವಿತರಿಸಿದರು. ಈ ಮೂಲಕ ಸಂವಿಧಾನದ ಮೂಲ ಆಶಯಗಳು ಜನಬಳಕೆಯಾಗಬೇಕು ಎನ್ನುವ ಜನಜಾಗೃತಿ ಅಭಿಯಾನವನ್ನು ನಡೆಸಿಕೊಟ್ಟರು.