ಬೆಂಗಳೂರು : ಶೈಕ್ಷಣಿಕ ಸಂಸ್ಥೆಗಳ ಹಾಸ್ಟೆಲ್, ವಸತಿ ಶಾಲೆ-ಕಾಲೇಜುಗಳಲ್ಲಿ 5ಕ್ಕಿಂತ ಹೆಚ್ಚು ಕೊರೊನಾ ಪ್ರಕರಣಗಳು ಪತ್ತೆಯಾದ್ರೆ ಅದನ್ನ ಕಂಟೇನ್ಮೆಂಟ್ ವಲಯ ಅಂತಾ ಘೋಷಿಸಲಾಗುವುದು ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ಹೇಳಿದ್ದಾರೆ.
ಟ್ವೀಟ್ ಮೂಲಕ ವಿಷ್ಯ ತಿಳಿಸಿದ ಸಚಿವರು, ‘ ಶೈಕ್ಷಣಿಕ ಸಂಸ್ಥೆಗಳ ಹಾಸ್ಟೆಲ್, ವಸತಿ ಶಾಲೆ-ಕಾಲೇಜುಗಳಲ್ಲಿ 5ಕ್ಕಿಂತ ಹೆಚ್ಚು ಕೊರೊನಾ ಪ್ರಕರಣಗಳು ಪತ್ತೆಯಾದರೇ ಅದನ್ನ ಕಂಟೇನ್ಮೆಂಟ್ ವಲಯ ಎಂದು ಘೋಷಿಸಲಾಗುವುದು. ಇನ್ನು ಕೇರಳದಿಂದ ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರು 72 ಗಂಟೆಗಳಿಗಿಂತ ಹಳೆಯದಲ್ಲದ ಆರ್ ಟಿ ಪಿಸಿಆರ್ ವರದಿಯನ್ನ ಕಡ್ಡಾಯವಾಗಿ ಹೊಂದಿರಬೇಕು’ ಎಂದಿದ್ದಾರೆ.
ಅಂದ್ಹಾಗೆ, ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವ್ರು, ಫೆಬ್ರವರಿ 22ರಿಂದ ಬೆಂಗಳೂರು ನಗರ ಜಿಲ್ಲೆ ಹಾಗೂ ಕೇರಳ ಗಡಿ ಭಾಗದಲ್ಲಿ 8ನೇ ತರಗತಿ ಮಾತ್ರ ಆರಂಭಿಸಿ, ಉಳಿದ ಜಿಲ್ಲೆಗಳಲ್ಲಿ 6 ರಿಂದ 8ನೇ ತರಗತಿಗಳನ್ನ ಆರಂಭಿಸುವುದಾಗಿ ತಿಳಿದ್ದಾರೆ.