Friday, May 14, 2021
Homeರಾಜಕೀಯಕೊರೋನ ಕಂಟ್ರೋಲ್ ಗಾಗಿ ಸಚಿವರು, ಆಯಾ ಜಿಲ್ಲೆಯ ಉಸ್ತುವಾರಿ ಸಚಿವರು ಸೇರಿದಂತೆ ಪ್ರತಿಯೊಬ್ಬ ಅಧಿಕಾರಿಗಳಿಗೂ ಕರ್ತವ್ಯ...

ಕೊರೋನ ಕಂಟ್ರೋಲ್ ಗಾಗಿ ಸಚಿವರು, ಆಯಾ ಜಿಲ್ಲೆಯ ಉಸ್ತುವಾರಿ ಸಚಿವರು ಸೇರಿದಂತೆ ಪ್ರತಿಯೊಬ್ಬ ಅಧಿಕಾರಿಗಳಿಗೂ ಕರ್ತವ್ಯ ಹಂಚಿಕೆ : ಸಿ. ಎಂ. ಯಡಿಯೂರಪ್ಪ

- Advertisement -
Rental
Rental
- Advertisement -Home Plus
- Advertisement -
Platform
Maya Builders

ಬೆಂಗಳೂರು : ಇಂದಿನ ಕೊರೋನಾ ಕಂಟ್ರೋಲ್ ಮಹತ್ವದ ತುರ್ತು ಸಚಿವ ಸಂಪುಟದಲ್ಲಿ ಸಿಎಂ ಯಡಿಯೂರಪ್ಪ, ರಾಜ್ಯದಲ್ಲಿ ಕೊರೋನಾ ಕಂಟ್ರೋಲ್ ಗಾಗಿ ಮಹತ್ವದ ನಿರ್ಧಾರಗಳನ್ನು ಕೈಗೊಂಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರಿಗೆ ಕೂಡಲೇ ಜಿಲ್ಲೆಗಳಿಗೆ ತೆರಳಿ, ಅಲ್ಲಿಯೇ ಇದ್ದು ಸೂಕ್ತ ಕೊರೋನಾ ನಿಯಂತ್ರಣ ವ್ಯವಸ್ಥೆ ಮಾಡುವಂತೆ ಸೂಚಿಸಿರುವ ಅವರು, ಆಕ್ಸಿಜನ್ ನಿರ್ವಹಣೆ, ಔಷಧಿಗಳು, ಬೆಡ್ ಸಿಗದ ಪರಿಸ್ಥಿತಿಯನ್ನು ಸರಿ ಪಡಿಸೋದಕ್ಕಾಗಿ ಸಚಿವರಿಗೆ ಜವಾಬ್ದಾರಿಗಳನ್ನು ವಹಿಸಿದ್ದಾರೆ. ಈ ಮೂಲಕ ಸಿಎಂ ಯಡಿಯೂರಪ್ಪ ಕೊರೋನಾ ಕಂಟ್ರೋಲ್ ಗೆ ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಜೊತೆಗೆ ಮೇ.12ರ ನಂತ್ರ ಕೊರೋನಾ ಕರ್ಪ್ಯೂ ಮುಂದುವರಿಕೆ ಬಗ್ಗೆ ಏನ್ ಹೇಳಿದ್ರು ಅಂತ ಮುಂದೆ ಓದಿ…

ಇಂದಿನ ತುರ್ತು ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಸಿಎಂ ಯಡಿಯೂರಪ್ಪ ಅವರು, ಪ್ರತಿಯೊಬ್ಬ ಜಿಲ್ಲಾ ಉಸ್ತುವಾರಿ ಸಚಿವರು ಆಯಾ ಜಿಲ್ಲೆಗಳಿಗೆ ತೆರಳಿ, ಅಲ್ಲಿಯೇ ಇದ್ದು, ಅಲ್ಲಿನ ಸಮಸ್ಯೆಗಳನ್ನು ನಿವಾರಿಸುವ ಕೆಲಸ ಮಾಡಬೇಕು.

ಇಂತಹ ನಿರ್ಧಾರ ಕೈಗೊಳ್ಳಲು ಅವರಿಗೆ ಸಂಪೂರ್ಣ ಅವಕಾಶ ನೀಡಲಾಗಿದೆ. ಕೋವಿಡ್ ನಿರ್ವಣೆಯ ಹೊಣೆಗಾರಿಕೆ ಅವರಿಗೆ ಸಂಪೂರ್ಣ ಅವಕಾಶ ನೀಡಲಾಗಿದೆ ಎಂದರು.

ಜಗದೀಶ್ ಶೆಟ್ಟರ್ ಆಕ್ಸಿಜನ್ ಸರಬರಾಜು ನಿರ್ವಹಣೆ ಬಗ್ಗೆ, ಕೇಂದ್ರ ಸರ್ಕಾರದಿಂದ ಸಂಪರ್ಕ ಸಾಧಿಸಿ, ಅಗತ್ಯ ಆಕ್ಸಿಜನ್ ತರೆಸಿಕೊಡುವಂತ ಕೆಲಸ ಮಾಡುತ್ತಾರೆ. ಅಗತ್ಯ ಔಷಧಿ, ರೆಮಿಡಿಸಿವಿರ್ ನಿರ್ವಹಣೆಯ ಜವಾಬ್ದಾರಿಯನ್ನು ಉಪ ಮುಖ್ಯಮಂತ್ರಿ ಡಾ.ಸಿಎನ್ ಅಶ್ವತ್ಥ್ ನಾರಾಯಣ್ ಅವರಿಗೆ ವಹಿಸಲಾಗಿದೆ. ಔಷಧಿಯ ಕೊರತೆ ಆಗದಂತೆ ನೋಡಿಕೊಳ್ಳುವ ಜವಾಬ್ದಾರಿ ನಿರ್ವಹಿಸಲಿದ್ದಾರೆ. ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿಗಳನ್ನು ಕೋವಿಡ್ ಕೆಲಸಕ್ಕೆ ಬಳಸಿಕೊಳ್ಳುವ ಕೆಲಸ ಮಾಡಲಾಗಿದ್ದಾರೆ ಎಂದರು.

ಬಸವರಾಜ ಬೊಮ್ಮಾಯಿ ಹಾಗೂ ಆರ್ ಅಶೋಕ್ ಅವರಿಗೆ ಅಗತ್ಯ ಬೆಡ್ ವ್ಯವಸ್ಥೆ ಮಾಡಲಿದ್ದಾರೆ. ಅರವಿಂದ್ ಲಿಂಬಾವಳಿಯವರು ವಾರ್ ರೂಂ ಹಾಗೂ ಕಾಲ್ ಸೆಂಟರ್ ನಿರ್ವಹಣೆ ಮಾಡಲಿದ್ದಾರೆ. ಈ ಮೂಲಕ ವೈದ್ಯಕೀಯ ನೆರವನ್ನು ನೀಡಲಿದ್ದಾರೆ ಎಂದರು.

ಚಾಮರಾಜನಗರದಲ್ಲಿ ಘಟನೆ ಬಗ್ಗೆ ವಿಚಾರಿಸಿದ್ದೇನೆ. ಈ ಘಟನೆಯಲ್ಲಿ ಯಾರೇ ತಪ್ಪಿತಸ್ಥರಿದ್ದರೂ ಕ್ರಮ ಕೈಗೊಳ್ಳಲಾಗುತ್ತದೆ. ಮುಂದೆ ಇಂತಹ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲಾಗುತ್ತದೆ. ಈಗಾಗಲೇ ತನಿಖೆಗೆ ಆದೇಶಿಸಲಾಗಿದ್ದು, ವರದಿ ನಂತ್ರ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಈಗಾಗಲೇ ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿನ ಅಲೆ ನಿಯಂತ್ರ ಬಂದಿದೆ. ರಾಜ್ಯದಲ್ಲೂ ಕೊರೋನಾ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ. ರಾಜ್ಯದಲ್ಲಿ ಮಾಧ್ಯಮಗಳಲ್ಲಿ ಕೆಲಸ ಮಾಡುವಂತ ಕೆಲಸಗಾರರನ್ನು ಫ್ರಂಟ್ ಲೈನ್ ವರ್ಕರ್ ಎಂಬುದಾಗಿ ಪರಿಗಣಿಸಿ, ಅವರಿಗೂ ಆದ್ಯತೆಯ ಮೇರೆಗೆ ಕೊರೋನಾ ಲಸಿಕೆ ನೀಡುವಂತ ವ್ಯವಸ್ಥೆ ಮಾಡಲಾಗುತ್ತದೆ ಎಂಬುದಾಗಿ ಸಿಎಂ ಘೋಷಿಸಿದರು.

ರಾಜ್ಯದಲ್ಲಿ ಕೊರೋನಾ ಸೋಂಕಿನ ನಿಯಂತ್ರಣಕ್ಕಾಗಿ ವೈದ್ಯಕೀಯ ಸಿಬ್ಬಂದಿಗಳ ನೇಮಕಕ್ಕೆ ಕ್ರಮ ಕೈಗೊಳ್ಳಲಾಗಿದೆ. ವೈದ್ಯರು, ನರ್ಸ್ ಗಳನ್ನು ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಕೆಲಸ ಮಾಡೋದಕ್ಕಾಗಿ ನೇಮಕ ಮಾಡಿಕೊಳ್ಳಲಾಗುತ್ತದೆ. ಈ ಮೂಲಕ ಕೊರೋನಾ ಸೋಂಕಿತರಿಗೆ ಸೂಕ್ತ ವೈದ್ಯಕೀಯ ವ್ಯವಸ್ಥೆ ಮಾಡುವ ನಿರ್ಧರ ಕೈಗೊಳ್ಳಲಾಗಿದೆ ಎಂದರು.

ಕೊರೋನಾ ಕಂಟ್ರೋಲ್ ಗಾಗಿ ರಾಜ್ಯದಲ್ಲಿ ಮತ್ತೆ ಮೇ.12ರ ನಂತ್ರ ಕೊರೋನಾ ಕರ್ಪ್ಯೂ ಮುಂದುವರೆಯುತ್ತಾ ಎನ್ನುವಂತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದಂತ ಸಿಎಂ ಯಡಿಯೂರಪ್ಪ, ಆ ಬಗ್ಗೆ ಅಧಿಕಾರಿಗಳು, ತಜ್ಞರ ಜೊತೆಗೆ ಸಭೆ ನಡೆಸಲಾಗುತ್ತದೆ. ಆ ಸಭೆಯಲ್ಲಿ ಚರ್ಚಿಸಿ, ಮೇ.12ರ ನಂತ್ರ ಮುಂದುವರೆಸಬೇಕಾ ಅಥವಾ ಬೇಡವಾ ಎನ್ನುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದರು.

- Advertisement -Hunger

LEAVE A REPLY

Please enter your comment!
Please enter your name here

- Advertisment -

Most Popular

Recent Comments