Friday, May 14, 2021
Homeರಾಜಕೀಯಕೋವಿಡ್ ಕಾರ್ಯಪಡೆ ಪುನಾರಚನೆ : ಅಧ್ಯಕ್ಷರಾಗಿ ಡಿಸಿಎಂ ಅಶ್ವತ್ಥನಾರಾಯಣ ನೇಮಕ

ಕೋವಿಡ್ ಕಾರ್ಯಪಡೆ ಪುನಾರಚನೆ : ಅಧ್ಯಕ್ಷರಾಗಿ ಡಿಸಿಎಂ ಅಶ್ವತ್ಥನಾರಾಯಣ ನೇಮಕ

- Advertisement -
Rental
Rental
- Advertisement -Home Plus
- Advertisement -
Platform
Maya Builders

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ನಿಯಂತ್ರಣದ ಉದ್ದೇಶದಿಂದ ಮುಖ್ಯಮಂತ್ರಿ ಯಡಿಯೂರಪ್ಪ ಕೋವಿಡ್‌ ಕಾರ್ಯಪಡೆಯನ್ನು ಪುನಾರಚಿಸಿದ್ದು, ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರನ್ನು ಕಾರ್ಯಪಡೆ ಅಧ್ಯಕ್ಷರನ್ನಾಗಿ ನೇಮಕಗೊಳಿಸಲಾಗಿದೆ.

ಈ ಹಿಂದೆ ಲೋಕೋಪಯೋಗಿ ಸಚಿವ, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಈ ಕಾರ್ಯಪಡೆ ಅಧ್ಯಕ್ಷರಾಗಿದ್ದರು. ಪುನಾರಚನೆಗೊಂಡ ಈ ಕಾರ್ಯಪಡೆಯಲ್ಲಿ ಅಧ್ಯಕ್ಷರಾಗಿ ಡಾ.ಅಶ್ವತ್ಥನಾರಾಯಣ, ಸದಸ್ಯರಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಎಸ್.‌ಸುರೇಶ್‌ ಕುಮಾರ್‌, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಖಾತೆ ಸಚಿವ ಸಿ.ಸಿ.ಪಾಟೀಲ್‌ ಹಾಗೂ ಆರೋಗ್ಯ & ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ.ಕೆ.ಸುಧಾಕರ್‌ ಅವರನ್ನು ನಿಯುಕ್ತಿಗೊಳಿಸಿ ರಾಜ್ಯಸರ್ಕಾರ ಆದೇಶಿಸಿದೆ.

ಪುನಾರಚನೆಗೊಂಡ ಕೋವಿಡ್ ಕಾರ್ಯಪಡೆಗೆ ಇಡೀ ರಾಜ್ಯದ ಕೋವಿಡ್ ಪರಿಸ್ಥಿತಿಯ ಉಸ್ತುವಾರಿ ಜತೆಗೆ‌, ಉನ್ನತ ಮಟ್ಟದ ನಿರ್ಧಾರಗಳನ್ನು ಕೈಗೊಳ್ಳುವ ಅಧಿಕಾರವಿದೆ.

- Advertisement -Hunger

LEAVE A REPLY

Please enter your comment!
Please enter your name here

- Advertisment -

Most Popular

Recent Comments