Friday, May 14, 2021
Homeರಾಜಕೀಯಕೋವಿಡ್‍ ಪರಿಸ್ಥಿತಿ ನಿರ್ವಹಣೆಗೆ ವಿಶೇಷ ಸಚಿವ ಸಂಪುಟ ಸಭೆ ಕರೆದ ಸಿಎಂ

ಕೋವಿಡ್‍ ಪರಿಸ್ಥಿತಿ ನಿರ್ವಹಣೆಗೆ ವಿಶೇಷ ಸಚಿವ ಸಂಪುಟ ಸಭೆ ಕರೆದ ಸಿಎಂ

- Advertisement -
Rental
Rental
- Advertisement -Home Plus
- Advertisement -
Platform
Maya Builders

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ಹಿನ್ನಲೆಯಲ್ಲಿ ಸಿಎಂ ಬಿ.ಎಸ್ ಯಡಿಯೂರಪ್ಪ ಇಂದು ಸಂಜೆ ತುರ್ತು ವಿಶೇಷ ಸಚಿವ ಸಂಪುಟ ಸಭೆ ಕರೆದಿದ್ದಾರೆ. ರಾಜ್ಯದಲ್ಲಿ ಆಕ್ಸಿಜನ್, ಲಸಿಕೆ, ಔಷಧಗಳ ಕೊರತೆ ಉಂಟಾಗಿರುವ ಬಗ್ಗೆ ಸಭೆಯಲ್ಲಿ ಚರ್ಚಿಸಲು ತೀರ್ಮಾನಿಸಲಾಗಿದೆ.

ಕೋಲಾರ ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆಯಿಂದ ಸೋಂಕಿತರು ಮೃತಪಟ್ಟ ಘಟನೆ ಮಾಸುವ ಮುನ್ನವೇ ಚಾಮರಾಜನಗರದಲ್ಲಿ ದುರಂತ ಸಂಭವಿಸಿದೆ. ಹೀಗಾಗಿ ಇಂಥಹಾ ಘಟನೆ ಮರುಕಳಿಸದಂತೆ ಕ್ರಮ ತೆಗೆದುಕೊಳ್ಳುವ ಬಗ್ಗೆ ಸಭೆಯಲ್ಲಿ ತೀಮಾನ ತೆಗೆದುಕೊಳ್ಳುವ ಸಾಧ್ಯತೆಯಿದೆ.

ಅಲ್ಲದೆ, ಸದ್ಯ ಜಾರಿಯಲ್ಲಿರುವ ಜನತಾ ಕರ್ಫ್ಯೂವನ್ನು ಮುಂದೂಡುವ ಬಗ್ಗೆಯೂ ಮೀಟಿಂಗ್ ನಲ್ಲಿ ಸಮಾಲೋಚನೆ ನಡೆಯುವ ಸಾಧ್ಯತೆಯಿದೆ. ರಾಜ್ಯದಲ್ಲಿ ಸೋಂಕಿನ ಪ್ರಮಾಣ ಹತೋಟಿಗೆ ಬರದೇ ಇರುವುದರಿಂದ ಎರಡು ವಾರಗಳ ಸಂಪೂರ್ಣ ಲಾಕ್ ಡೌನ್ ಮಾಡಬೇಕೆಂದು ಕೆಲವು ಸಚಿವರು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಸಭೆಯಲ್ಲಿ ಸರ್ಕಾರ ಯಾವ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತೆ ಕಾದು ನೋಡಬೇಕಿದೆ.

- Advertisement -Hunger

LEAVE A REPLY

Please enter your comment!
Please enter your name here

- Advertisment -

Most Popular

Recent Comments