- Advertisement -
ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದಿನನಿತ್ಯ ಕೊರೋನಾದ ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣ, ಸೋಂಕು ನಿಯಂತ್ರಿಸಲು ಪಾಲಿಕೆ ಹಲವು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಪಾಲಿಕೆ ವ್ಯಾಪ್ತಿಯಲ್ಲಿರುವ ಎಲ್ಲಾ ಹೋಟೆಲ್ ಮತ್ತು ರೆಸ್ಟೋರೆಂಟ್‍ಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ಕೋವಿಡ್ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ. ಎಲ್ಲಾ ನಗರ ಆರೋಗ್ಯ ಕೇಂದ್ರಗಳಲ್ಲಿ ಸಂಜೆಯ ವೇಳೆ ಕೋವಿಡ್ ಪರೀಕ್ಷೆ ನಡೆಸಲಾಗುತ್ತಿದೆ. ಸಾರ್ವಜನಿಕರು, ಕಾರ್ಮಿಕರು ಇದರ ಉಪಯೋಗ ಪಡೆಯುವಂತೆ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.