Saturday, June 3, 2023
HomeUncategorizedಮಂಗಳೂರಿಗೆ ಮತ್ತೆ ಕೊರೊನಾ ಶಾಕ್: 200 ವಿದ್ಯಾರ್ಥಿಗಳಿಗೆ ಮಹಾಮಾರಿ ಸೋಂಕು

ಮಂಗಳೂರಿಗೆ ಮತ್ತೆ ಕೊರೊನಾ ಶಾಕ್: 200 ವಿದ್ಯಾರ್ಥಿಗಳಿಗೆ ಮಹಾಮಾರಿ ಸೋಂಕು

- Advertisement -


Renault

Renault
Renault

- Advertisement -

ಮಂಗಳೂರು : ಕರಾವಳಿ ಭಾಗದಲ್ಲಿ ಕೊರೊನಾ ವೈರಸ್ ಸೋಂಕು ಅಬ್ಬರಿಸೋದಕ್ಕೆ ಶುರುಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 200 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದು, ಹೊಸ ಮಾದರಿಯ ಕೊರೊನಾ ಸೋಂಕಿನ ಪತ್ತೆಗೆ ಜಿಲ್ಲಾ ಆರೋಗ್ಯ ಇಲಾಖೆ ಮುಂದಾಗಿದೆ.

ನೆರೆಯ ಕೇರಳದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ವಿದ್ಯಾಭ್ಯಾಸಕ್ಕಾಗಿ ಮಂಗಳೂರಿಗೆ ಆಗಮಿಸಿದ್ದ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 200ಕ್ಕೂ ಅಧಿಕ ವಿದ್ಯಾರ್ಥಿಗಳ ಗಂಟಲ ದ್ರವ ಮಾದರಿಯನ್ನು ಬೆಂಗಳೂರಿನ ನಿಮಾನ್ಸ್‌ ಆಸ್ಪತ್ರೆಗೆ ಕಳುಹಿಸಲು ನಿರ್ಧರಿಸಲಾಗಿದೆ.

ದೇಶದಲ್ಲಿ ವಾಪಾಸಾದ ಹಲವು ಜನರಲ್ಲಿ ಈಗಾಗಲೇ ಇಂಗ್ಲೆಂಡ್ ಮಾದರಿಯ ವೈರಸ್ ಪತ್ತೆಯಾಗಿದೆ. ಅದರಲ್ಲೂ ಕೇರಳದಿಂದ ಬಂದಿರುವ ವಿದ್ಯಾರ್ಥಿಗಳೇ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಹೀಗಾಗಿ ಆರೋಗ್ಯ ಇಲಾಖೆ ಇಂತಹ ನಿರ್ಧಾರಕ್ಕೆ ಬಂದಿದೆ.

ಆರಂಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಟ್ಟಹಾಸ ಮೆರೆದಿದ್ದ ಕೊರೊನಾ ಹೆಮ್ಮಾರಿಯ ವಿರುದ್ದ ಇದೀಗ ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಈಗಾಗಲ ಮೊದಲ ಹಂತದ ಲಸಿಕಾ ಕಾರ್ಯವನ್ನು ಮುಗಿಸಿದ್ದು, ಎರಡನೇ ಹಂತದ ಲಸಿಕೆ ನೀಡಲು ಮುಂದಾಗಿದೆ.

- Advertisement -

LEAVE A REPLY

Please enter your comment!
Please enter your name here

Most Popular

Recent Comments