Friday, October 7, 2022
Homeಕ್ರೈಂಸ್ನೇಹಿತರಿಂದಲೇ ನೀಚ ಕೃತ್ಯ >> ಬಸ್ ನಿಲ್ದಾಣದಲ್ಲಿದ್ದ ಮಹಿಳೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ !!!

ಸ್ನೇಹಿತರಿಂದಲೇ ನೀಚ ಕೃತ್ಯ >> ಬಸ್ ನಿಲ್ದಾಣದಲ್ಲಿದ್ದ ಮಹಿಳೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ !!!

- Advertisement -
Renault

Renault

Renault

- Advertisement -

ಬೆಳಗಾವಿ: ಸ್ನೇಹಿತರಿಬ್ಬರು ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ನಡೆದಿದ್ದು, ಇಬ್ಬರು ಆರೋಪಿಗಳನ್ನು ಮಾರ್ಕೆಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ಮಾಸ್ತಮರಡಿ ಗ್ರಾಮದ ಎಲ್ಲಪ್ಪ ನಾಯಕ ಮತ್ತು ಆತನ ಸ್ನೇಹಿತ ದುರ್ಗೇಶ್ ಬಂಧಿತ ಆರೋಪಿಗಳಾಗಿದ್ದಾರೆ.

ಬೆಳಗಾವಿ ನಗರದಲ್ಲಿ ವಾಸವಾಗಿದ್ದ ಆರೋಪಿಗಳು ಸಿಟಿ ಬಸ್ ನಿಲ್ದಾಣದಲ್ಲಿ ನಿಂತಿದ್ದ ಮಹಿಳೆಯನ್ನು ಅನಿಗೋಳಕ್ಕೆ ಕರೆದುಕೊಂಡು ಹೋಗುವುದಾಗಿ ಹೇಳಿದ್ದು, ಮನೆಯಲ್ಲಿ ಕೂಡಿ ಹಾಕಿ ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆ ದೂರು ನೀಡಿದ್ದಾರೆ.

ಬೆಳಗಾವಿ ನಗರದ ಮಹಿಳೆಗೆ 4 ವರ್ಷದ ಹಿಂದೆ ಮದುವೆಯಾಗಿದ್ದು, ಎರಡು ವರ್ಷದ ಹಿಂದೆ ಪತಿ ತೀರಿಕೊಂಡ ನಂತರ ತವರಿನಲ್ಲಿ ನೆಲೆಸಿದ್ದರು. ಆಕೆಯ ಪರಿಚಯಸ್ಥರಾಗಿದ್ದ ಆರೋಪಿಗಳು ಈ ಕೃತ್ಯವೆಸಗಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

- Advertisement -


LEAVE A REPLY

Please enter your comment!
Please enter your name here

Most Popular

Recent Comments